ತೀರ್ಪು ಬಂದರೂ ಶಿವಮೊಗ್ಗದಲ್ಲಿ ಕೆಲವು ವಿದ್ಯಾರ್ಥಿನಿಯರಿಂದ ಹಿಜಾಬ್’ಗೆ ಪಟ್ಟು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 16 ಮಾರ್ಚ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹೈಕೋರ್ಟ್ ತೀರ್ಪು ಹಿನ್ನೆಲೆ ಹಿಜಾಬ್ ಧರಿಸಿ ಬಂದವರಿಗೆ ಶಾಲೆ, ಕಾಲೇಜುಗಳ ತರಗತಿ ಪ್ರವೇಶವನ್ನು ನಿರಾಕರಿಸಲಾಯಿತು. ಬಹುತೇಕ ಕಡೆ ವಿದ್ಯಾರ್ಥಿನಿಯರು ತೀರ್ಪಿಗೆ ಮನ್ನಣೆ ನೀಡಿದರು.

Shimoga Nanjappa Hospital

ನಗರದ ಒಂದು ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಮಾತ್ರ ಹಿಜಾಬ್ ಧರಿಸಲು ಅವಕಾಶ ಕೊಡಬೇಕು ಎಂದು ಹಠ ಹಿಡಿದರು. ಕಾಲೇಜು ಬಳಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ತರಗತಿಗೆ ತೆರಳಿದ ವಿದ್ಯಾರ್ಥಿನಿಯರು

ಹೈಕೋರ್ಟ್ ತೀರ್ಪು ಬಂದ ನಂತರ ಇವತ್ತು ಶಾಲೆ, ಕಾಲೇಜುಗಳ ತರಗತಿ ಪುನಾರಂಭವಾಗಿವೆ. ಬಹುತೇಕ ಕಡೆ ವಿದ್ಯಾರ್ಥಿನಿಯರಿಗೆ ರೆಸ್ಟ್ ರೂಂನಲ್ಲಿ ಹಿಜಾಬ್, ಬುರ್ಖಾ ತೆಗೆಯಲು ಅವಕಾಶ ಕಲ್ಪಿಸಲಾಗಿತ್ತು. ಎಲ್ಲಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಬುರ್ಖಾ, ಹಿಜಾಬ್ ಹೊರತು ತರಗತಿಗಳನ್ನು ಪ್ರವೇಶಿಸಿದರು.

ಹಿಜಾಬ್’ಗೆ ಹಠ ಹಿಡಿದ ವಿದ್ಯಾರ್ಥಿನಿಯರು

ಇನ್ನು, ನಗರದ ಪ್ರಮುಖ ಮಹಿಳಾ ಪದವಿ ಕಾಲೇಜು ಒಂದರಲ್ಲಿ ಕೆಲವು ವಿದ್ಯಾರ್ಥಿನಿಯರು ಹಿಜಾಬ್’ಗೆ ಹಠ ಹಿಡಿದರು. ಕಾಲೇಜು ಆಡಳಿತ ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಅವಕಾಶ ನೀಡದ ಹಿನ್ನೆಲೆ, ವಿದ್ಯಾರ್ಥಿನಿಯರು ಕಾಲೇಜು ಅವರಣದ ಹೊರಗೆ ನಿಂತರು. ತಮಗೆ ಹಿಜಾಬ್ ಧರಿಸಲು ಅವಕಾಶ ಕೊಡಬೇಕು ಎಂದು ಪಟ್ಟು ಹಿಡಿದರು. ಕಾಲೇಜು ಸಿಬ್ಬಂದಿ ಅವಕಾಶ ನೀಡದ ಹಿನ್ನೆಲೆ ಮನೆಗೆ ಮರಳಿದರು.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

Shimoga JNNCE college VTU Ranking

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment