ಶಿವಮೊಗ್ಗದ ಮತ್ತೊಂದು ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ, ಬಿಗುವಿನ ವಾತಾವರಣ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಫೆಬ್ರವರಿ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದ ಮತ್ತೊಂದು ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ಶುರುವಾಗಿದೆ. ಇದರಿಂದ ಕಾಲೇಜು ಮುಂಭಾಗ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Nanjappa Hospital Health Pack

ATNC ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ಆರಂಭವಾಗಿದೆ. ವಿದ್ಯಾರ್ಥಿಗಳ ಒಂದು ಗುಂಪು ಬುರ್ಖಾ ಧರಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರೆ, ಮತ್ತೊಂದು ಗುಂಪು ಯುನಿಫಾರಂ ಕಡ್ಡಾಯಗೊಳಿಸಬೇಕು, ಇಲ್ಲವಾದಲ್ಲಿ ಕೇಸರಿ ಶಾಲು ಧರಿಸಿ ತರಗತಿಗೆ ಬರುತ್ತೇವೆ ಎಂದು ಪಟ್ಟು ಹಿಡಿದರು.

ಕ್ಯಾಂಪಸ್ಸಿನಲ್ಲಿ ಬಿಗುವಿನ ವಾತಾವರಣ

ವಿದ್ಯಾರ್ಥಿಗಳ ಪ್ರತಿಭಟನೆಯಿಂದ ATNC ಕಾಲೇಜಿನಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣಾಯಿತು. ಬೆಳಗ್ಗೆಯಿಂದ ತಣ್ಣಗಿದ್ದ ಕ್ಯಾಂಪಸ್ಸಿನಲ್ಲಿ ಮಧ್ಯಾಹ್ನದ ವೇಳೆ ವಿವಾದ ಭುಗಿಲೆದ್ದಿದೆ.

ಬುರ್ಖಾ ಧರಿಸಲು ಅವಕಾಶ ನೀಡಬೇಕು ಎಂದು ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಮನವಿ ಮಾಡಿದರು. ಆದರೆ ಯುನಿಫಾರಂ ಕಡ್ಡಾಯಗೊಳಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದರು.

ಈ ಸಂದರ್ಭ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳ ಗುಂಪು, ಯುನಿಫಾರಂ ಕಡ್ಡಾಯಗೊಳಿಸಬೇಕು. ಇಲ್ಲವಾದಲ್ಲಿ ತಾವು ಕೇಸರಿ ಶಾಲು ಧರಿಸಿ ತರಗತಿಗೆ ಬರುವುದಾಗಿ ತಿಳಿಸಿದರು. ಆ ಬಳಿಕ ಕ್ಯಾಂಪಸ್ಸಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು.

ATNC College Muslim Students wearing burkha in Shimoga

ಸರ್ಕಲ್ ಬಳಿ ಗುಂಪುಗೂಡಿದ ಜನ

ATNC ಕಾಲೇಜಿನಲ್ಲಿ ನಡೆಯುತ್ತಿರುವ ಬೆಳವಣಿಗೆ ಬೆನ್ನಿಗೆ ಮಹಾವೀರ ಸರ್ಕಲ್ ಬಳಿ ಯುವಕರು ಗುಂಪು ಗೂಡಿಸಿದರು. ಕೂಡಲೆ ಸ್ಥಳಕ್ಕೆ ಬಂದ ಪೊಲೀಸರು ಗುಂಪು ಚದುರಿಸಿದರು. ಪರಿಸ್ಥಿತಿ ತಿಳಿಗೊಳಿಸಿದರು.

ATNC ಕಾಲೇಜಿನಲ್ಲಿ 1082 ವಿದ್ಯಾರ್ಥಿಗಳು ವಿದ್ಯಭ್ಯಾಸ ಮಾಡುತ್ತಿದ್ದಾರೆ. ಕುಂದಾಪುರದಲ್ಲಿ ಆರಂಭವಾದ ಹಿಜಾಬ್ ವಿವಾದದ ಬೆನ್ನಿಗೆ, ATNC ಕಾಲೇಜಿನಲ್ಲಿಯೂ ವಿವಾದ ಹುಟ್ಟುಕೊಂಡಿದೆ.

ಇದನ್ನೂ ಓದಿ | ‘ಹಿಜಾಬ್, ಕೇಸರಿ ಶಾಲು ಧರಿಸಿ ಬಂದರೆ ಸಹ್ಯಾದ್ರಿ ಕಾಲೇಜಿನಲ್ಲಿ ತರಗತಿಗೆ ಪ್ರವೇಶವಿಲ್ಲ’

ಇದನ್ನೂ ಓದಿ | ತೀರ್ಥಹಳ್ಳಿಯಲ್ಲೂ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳಿಗೆ ತರಗತಿ ಪ್ರವೇಶ ನಿರಾಕರಣೆ

Youths Protest in favour of hijab

Countries reach by shimoga live news

Shimoga PoliceAbout Shivamogga Live | WhatsApp Number 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment