ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 7 ಫೆಬ್ರವರಿ 2022
ಹಿಜಾಬ್ ವಿವಾದ ಶಿವಮೊಗ್ಗಕ್ಕೂ ಕಾಲಿಟ್ಟಿದೆ. ವಸ್ತ್ರ ಸಂಹಿತೆ ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿ ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ, ದಿಢೀರ್ ಪ್ರತಿಭಟನೆ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಾಣಿಜ್ಯ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗೆ ಬಂದಿದ್ದರು. ಇದಕ್ಕೆ ಕಾಲೇಜು ಆಡಳಿತ ಮಂಡಳಿ ಅವಕಾಶ ನೀಡಲಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕ್ಯಾಂಪಸ್’ನಲ್ಲಿ ವಿದ್ಯಾರ್ಥಿಗಳ ಆಕ್ರೋಶ
ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಕೇಸರಿ ಶಾಲು ಧರಿ ಮೆರವಣಿಗೆ ನಡೆಸಿದರು. ವಾಣಿಜ್ಯ ಕಾಲೇಜು ಕಟ್ಟಡದಿಂದ ವಿಜ್ಞಾನ ಕಾಲೇಜು ಕಟ್ಟಡದವರೆಗೆ ಮೆರವಣಿಗೆ ಮಾಡಿದರು. ಈ ವೇಳೆ ಜೈ ಶ್ರೀರಾಮ್, ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದರು. ಅಲ್ಲದೆ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಬೇಕು ಎಂದು ಆಗ್ರಹಿಸಿದರು.
ಹಿಜಾಬ್, ಕೇಸರಿ ಶಾಲು ಹಾಕುವಂತಿಲ್ಲ
ವಿದ್ಯಾರ್ಥಿಗಳ ಪ್ರತಿಭಟನೆಯ ಬೆನ್ನಿಗೆ ತರಗತಿಗೆ ಬರುವಾಗ ವಿದ್ಯಾರ್ಥಿಗಳು ಹಿಜಾಬ್ ಅಥವಾ ಕೇಸರಿ ಶಾಲು ಧರಿಸುವಂತಿಲ್ಲ. ವಸ್ತ್ರ ಸಂಹಿತೆ ಇರುವುದರಿಂದ ವಿದ್ಯಾರ್ಥಿಗಳು ಅದನ್ನು ಪಾಲಿಸಬೇಕು ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದರು.
ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ ಹಿನ್ನೆಲೆ, ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಕೆಲ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಡಿವೈಎಸ್’ಪಿ ಪ್ರಶಾಂತ್ ಮುನ್ನೋಳಿ, ಕೋಟೆ ಮತ್ತು ದೊಡ್ಡಪೇಟೆ ಠಾಣೆ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದರು.
Shimoga District Profile | Shimoga Police | WhatsApp 7411700200