ಹಿಂದೂಗಳ ಹತ್ಯೆ, ದೇವಾಸ್ಥಾನಗಳು ಧ್ವಂಸ, ನಿಲ್ಲದ ದೌರ್ಜನ, ಶಿವಮೊಗ್ಗದಲ್ಲಿ ಆಕ್ರೋಶ

 ಶಿವಮೊಗ್ಗ  LIVE 

ಶಿವಮೊಗ್ಗ: ಬಾಂಗ್ಲಾದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ (Hindu Groups) ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದವರ ಬರ್ಬರ ಹತ್ಯೆಗಳು, ದೌರ್ಜನ್ಯಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ದೇವಾಲಯಗಳ ಧ್ವಂಸ, ಮಹಿಳೆಯರ ಮೇಲಿನ ದೌರ್ಜನ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಂಭೀರವಾಗಿ ಪರಿಗಣಿಸಬೇಕು. ಭಾರತ ಸರ್ಕಾರವು ಅಗತ್ಯ ರಾಜತಾಂತ್ರಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ದ್ವೇಷ ಭಾಷಣ ವಿಧೇಯಕಕ್ಕೆ ವಿರೋಧ

hindu-groups-protest-in-Shimoga

ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ದ್ವೇಷ ಭಾಷಣ ವಿಧೇಯಕವನ್ನು ತಕ್ಷಣವೇ ವಾಪಾಸ್ಸು ಪಡೆಯಬೇಕು. ಈ ವಿಧೇಯಕವು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ. ಹಿಂದೂ ಸಮಾಜದ ಧಾರ್ಮಿಕ ಆಚರಣೆ, ಧರ್ಮಪ್ರಚಾರ ಹಾಗೂ ಸತ್ಯ ವಚನಕ್ಕೆ ಅಡ್ಡಿಯಾಗಲಿದೆ. ಆದ್ದರಿಂದ ಈ ವಿಧೇಯಕವನ್ನು ತಕ್ಷಣವೇ ಹಿಂಪಡೆಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನೂ ಓದಿ » ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಲೋಕಾಯುಕ್ತ ತಂಡ ದಿಢೀರ್‌ ಭೇಟಿ, ಪರಿಶೀಲನೆ

ಪ್ರಮುಖರಾದ ದಿನೇಶ್ ಚೌಹಾಣ್, ರಮೇಶ್ ಬಾಬು, ವಾಸುದೇವ, ಪ್ರಫುಲ್ಲಚಂದ್ರ, ಪರಿಸರ ರಮೇಶ್, ಯೋಗೇಶ್, ಪ್ರದೀಪ್, ಮುಕುಂದ, ಬಸವರಾಜ್, ಶಬರೀಶ್ ಮೊದಲಾದವರಿದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment