SHIVAMOGGA LIVE NEWS
ಶಿವಮೊಗ್ಗ | ಹಿಂದೂ ಸಂಘಟನೆಗಳ ಮಹಾಮಂಡಳಿ (Hindu Mahasabha) ವತಿಯಿಂದ ಶಿವಮೊಗ್ಗದಲ್ಲಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಸಾಂಪ್ರದಾಯಿಕವಾಗಿ ಮೆರವಣಿಗೆ ಮೂಲಕ ಗಣಪತಿ ಮೂರ್ತಿಯನ್ನು ತಂದು ವಿಶೇಷ ಪೂಜೆ ಸಲ್ಲಿಸಲಾಯಿತು.
ನಗರದ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ (Kote Bheemeshwara Temple) ಆವರಣದಲ್ಲಿ ಹಿಂದೂ ಮಹಾಸಭಾ (Hindu Mahasabha) ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
ವಾದ್ಯಗಳೊಂದಿಗೆ ಮೆರವಣಿಗೆ
ಪ್ರತಿ ವರ್ಷದಂತೆ ಕುಂಬಾರ ಬೀದಿಯ ಕಲಾವಿದ ಗಣೇಶ್ ಅವರ ಮನೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಮೂರ್ತಿ ತಯಾರಿಸಲಾಗಿತ್ತು. ಗಣೇಶ್ ಅವರ ಮನೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ಗಣಪತಿ ಮೂರ್ತಿಯನ್ನು ಮೆರವಣಿಗೆ ಮೂಲಕ ಕೋಟೆ ಭೀಮೇಶ್ವರ ದೇವಸ್ಥಾನಕ್ಕೆ ತರಲಾಯಿತು. ಕಲಾತಂಡಗಳು, ಮಂಗಳ ವಾದ್ಯಗಳೊಂದಿಗೆ ಮೆರವಣಿಗೆ ನಡೆಸಲಾಯಿತು.
ಪ್ರದಕ್ಷಿಣೆ, ವಿಶೇಷ ಪೂಜೆ
ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ಹಿಂದೂ ಮಹಾಸಭಾ ಗಣಪತಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮೂರ್ತಿಯನ್ನು ಹೊತ್ತು ದೇವಸ್ಥಾನದಲ್ಲಿ ಪ್ರದಕ್ಷಿಣೆ ನೆರವೇರಿಸಲಾಯಿತು. ಬಳಿಕ ದೇಗುಲದ ಆವರಣದಲ್ಲಿ ಹಿಂದೂ ಮಹಾಸಭಾ ಗಣಪತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ನೆರವೇರಿಸಲಾಯಿತು. ಈ ವೇಳೆ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.
ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆಗೆ ವೀರ ಸಾವರ್ಕರ್ (Veer Savarkar) ಕಾರಣಿಕರ್ತರು. ಹಾಗಾಗಿ ಇವತ್ತು ಗಣಪತಿ ಪ್ರತಿಷ್ಠಾಪನೆ ಮಾಡುತ್ತಿದ್ದಂತೆ ವೀರ ಸಾವರ್ಕರ್ ಪರವಾಗಿ ಘೋಷಣೆ ಕೂಗಲಾಯಿತು. ಇನ್ನು, ಕೋಟೆ ರಸ್ತೆಯಿಂದ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿರುವ ಶ್ರೀ ಭೀಮೇಶ್ವರ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ವೀರ ಸಾವರ್ಕರ್ ಮಹಾದ್ವಾರ ಸ್ಥಾಪಿಸಲಾಗಿದೆ. ಕರೋನ ಮತ್ತು ಲಾಕ್ ಡೌನ್ ಹಿನ್ನೆಲೆ ಸಾರ್ವಜನಿಕ ಗಣೇಶೋತ್ಸವ ಆಚರಣೆಯನ್ನು ಸರ್ಕಾರ ನಿರಾಕರಿಸಿತ್ತು. ಆದರೆ ಕಳೆದ ವರ್ಷ ಹಿಂದೂ ಮಹಾಸಭಾ ಗಣಪತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಆದರೆ ಮೆರವಣಿಗೆಗೆ ಅವಕಾಶ ಇರಲಿಲ್ಲ. ಹಾಗಾಗಿ ಅನಂತ ಚತುರ್ದಶಿಯಂದು ಮೆರವಣಿಗೆ ನಡೆಸದೆಯೆ ವಿಸರ್ಜನೆ ನೆರವೇರಿಸಲಾಗಿತ್ತು. ಇದನ್ನೂ ಓದಿ – ಥೈಲ್ಯಾಂಡ್, ಮಹಾರಾಷ್ಟ್ರದಂತೆ ಹೊಸನಗರದಲ್ಲೂ ಗಣಪತಿ ಮ್ಯೂಸಿಯಂ, ಹೇಗಿದೆ? ಏನೇನೆಲ್ಲ ಇದೆ? ADVERTISEMENT SHIVAMOGGA LIVE WHATSAPP ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. » ಶಿವಮೊಗ್ಗ ಲೈವ್ gmail » Whatsapp Number 7411700200ಕರೋನಾದಿಂದ ಮೆರವಣಿಗೆ ನಡೆದಿರಲಿಲ್ಲ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು