SHIVAMOGGA LIVE NEWS | 27 SEPTEMBER 2023
SHIMOGA : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಸೆ.28ರಂದು ಬೆಳಗ್ಗೆಯಿಂದ ರಾಜಬೀದಿ ಉತ್ಸವ (PROCESSION) ಆರಂಭವಾಗಲಿದೆ. ಈ ಹಿನ್ನೆಲೆ ನಗರದಲ್ಲಿ ವಾಹನ ಸಂಚಾರದ ಮಾರ್ಗ (ROUTE) ಬದಲಾವಣೆ ಮಾಡಲಾಗಿದೆ.
ಮೆರವಣಿಗೆ ಎಷ್ಟೊತ್ತಿಗೆ ಶುರುವಾಗುತ್ತೆ?
ಸೆ.28ರಂದು ಬೆಳಗ್ಗೆ 10.30ಕ್ಕೆ ಕೋಟೆ ಶ್ರೀ ಭೀಮೇಶ್ವರದ ದೇವಸ್ಥಾನದ ಆವರಣದಿಂದ ಹಿಂದೂ ಮಹಾಸಭಾ ಗಣಪತಿಯ ಮೆರವಣಿಗೆ ಆರಂಭವಾಗಲಿದೆ ಎಂದು ಹಿಂದೂ ಸಂಘಟನೆಗಳ ಮಹಾಮಂಡಳಿಯ ಸಂಚಾಲಕ ಎಸ್.ಎಂ. ದತ್ತಾತ್ರೇಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೆರವಣಿಗೆಯು (PROCESSION) ಡಾ.ಎಸ್.ಪಿ.ಎಂ.ರಸ್ತೆ, ಗಾಂಧಿ ಬಜಾರ್, ಬಿ.ಹೆಚ್.ರಸ್ತೆ, ನೆಹರೂ ರಸ್ತೆ, ದುರ್ಗಿಗುಡಿ, ಕುವೆಂಪು ರಸ್ತೆ, ಕೋಟೆ ಅಂಚೆ ಕಚೇರಿ ರಸ್ತೆ ಮೂಲಕ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನಕ್ಕೆ ಮೆರವಣಿಗೆ ತಲುಪಲಿದೆ. ದೇಗುಲದ ಹಿಂಬದಿ ಭೀಮನ ಮಡುವಿನಲ್ಲಿ ಗಣಪತಿಯ ವಿಸರ್ಜನೆ ನಡೆಯಲಿದೆ.
ವಾಹನ ಸಂಚಾರ ಮಾರ್ಗ ಬದಲಾವಣೆ
ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆ ಸೆ.28ರಂದು ನಗರದಲ್ಲಿ ವಾಹನ ಸಂಚಾರದ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶಿಸಿದ್ದಾರೆ.
ಗಣಪತಿ ಮೆರವಣಿ ಸಾಗುವ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆ ನಿಷೇಧಿಸಿದೆ.
ಭದ್ರಾವತಿ, ಬೆಂಗಳೂರು ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ ಮತ್ತು ಬಸ್‍ಗಳು ಎಂ.ಆರ್.ಎಸ್ ಸರ್ಕಲ್ ಬೈಪಾಸ್ ರಸ್ತೆ ಮುಖಾಂತರ ಹೋಗುವುದು. ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್‍ಗಳು ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
ಹೊನ್ನಾಳಿ, ಹರಿಹರ, ದಾವಣಗೆರೆಯಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನಗಳು ಮತ್ತು ಬಸ್‍ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರ, ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
ಇದನ್ನೂ ಓದಿ – ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಪ್ರಮುಖ 10 ಪಾಯಿಂಟ್
ಕೋಟೆ ರಸ್ತೆ ಮತ್ತು ಓಲ್ಡ್ ಬಾರ್ ಲೈನ್ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆ ಹೋಗುವ ಎಲ್ಲಾ ಬಸ್‍ಗಳು ಮತ್ತು ಭಾರೀ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್, ಆಲ್ಕೊಳ ಸರ್ಕಲ್, ಪೊಲೀಸ್ ಚೌಕಿ, ರಾಜ್ ಕುಮಾರ್ ಸರ್ಕಲ್, ಬೊಮ್ಮನಕಟ್ಟೆ ಮುಖಾಂತರವಾಗಿ ಸವಳಂಗ ರಸ್ತೆಗೆ ಹೋಗುವುದು.
ಇದನ್ನೂ ಓದಿ – ಶಿವಮೊಗ್ಗದ ಉಗ್ರ ನರಸಿಂಹ ಫುಲ್ ವೈರಲ್, ಎಲ್ಲರ ಮೊಬೈಲ್‌ನಲ್ಲೂ ಉಗ್ರಂ ವೀರಂ
ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆಯ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗುವುದು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಂದೋಬಸ್ತ್‌ಗೆ ಸಾವಿರ ಸಾವಿರ ಪೊಲೀಸ್, ಸಿಟಿಯಲ್ಲಿ ರೂಟ್ ಮಾರ್ಚ್, ಸಿಬ್ಬಂದಿಗೆ ಗುಣಮಟ್ಟದ ಊಟಕ್ಕೆ ಪ್ಲಾನ್
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200