ಶಿವಮೊಗ್ಗ ಲೈವ್
ಶಿವಮೊಗ್ಗ: ಹಿಂದೂ ಮಹಾಸಭಾ ಅಂಗ ಸಂಸ್ಥೆಯಾದ ಹಿಂದೂ ಸಂಘಟನಾ ಮಹಾಮಂಡಳಿಯ ಅಧ್ಯಕ್ಷರಾಗಿ ಸರಾಫ್ ಶ್ರೀಧರ್ ರಾವ್ ಹಾಗೂ ಕಾರ್ಯದರ್ಶಿಯಾಗಿ ಎ.ಎನ್. ಸತ್ಯನಾರಾಯಣ ಅವರು ಆಯ್ಕೆಯಾಗಿದ್ದಾರೆ.
ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಸಂಘಟನೆಯ ಸಭೆಯಲ್ಲಿ ಆಯ್ಕೆ ನಡೆಯಿತು. ಮಹಾಮಂಡಳಿಯ ಅಧ್ಯಕ್ಷ ಎಂ.ಕೆ. ಸುರೇಶ್ ಕುಮಾರ್ ಅವರ ನಿಧನದಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು.

ಸಭೆಯಲ್ಲಿ ಸಹ ಕಾರ್ಯದರ್ಶಿ ಎಸ್.ಎನ್. ಚನ್ನಬಸಪ್ಪ, ಖಜಾಂಚಿ ಎಸ್.ಎಂ. ದತ್ತಾತ್ರೇಯರಾವ್, ನಿರ್ದೇಶಕರಾದ ಹರಿಗೆ ಗೋಪಾಲಸ್ವಾಮಿ, ನಿರಂಜನ್, ರಾಜಶೇಖರ್ ಅಲಸೆ, ಚೇತನ್ ಎಸ್. ಮತ್ತು ಚಂದ್ರಶೇಖರ್ ಉಪಸ್ಥಿತರಿದ್ದರು. ನೂತನ ಪದಾಧಿಕಾರಿಗಳ ನೇತೃತ್ವದಲ್ಲಿ 82 ನೇ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಹಾಗೂ ಸಂಘಟನೆಯ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸುವ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು ಎಂದು ಸಂಚಾಲಕ ಡಿ. ದತ್ತಾತ್ರೇಯ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.