ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಸೆಪ್ಟೆಂಬರ್ 2021
ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನೆಯನ್ನು ಸರಳವಾಗಿ ನೆರವೇರಿಸಲಾಯಿತು. ಸರ್ಕಾರದ ಸೂಚನೆ ಹಿನ್ನೆಲೆ ಈ ಭಾರಿ ಮೆರವಣಿಗೆ ನಡೆಸದೆ ವಿಸರ್ಜನೆ ಮಾಡಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ವಿಸರ್ಜನಾ ಪೂರ್ವ ವಿಶೇಷ ಪೂಜೆ
ಕೋಟೆ ರಸ್ತೆಯ ಭೀಮೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಗಣಪತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಅನಂತ ಚತುರ್ದಶಿ ಹಿನ್ನಲೆ ಹಿಂದೂ ಮಹಾಸಭಾ ಗಣಪತಿಯನ್ನು ಇವತ್ತು ವಿಸರ್ಜಿಸಲಾಯಿತು. ಇದಕ್ಕೂ ಮೊದಲು ದೇಗುಲದ ಆವರಣದಲ್ಲಿ ಗಣಪತಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಮೆರವಣಿಗೆ ನಡೆಸದೆ ವಿಸರ್ಜನೆ
ಕೋವಿಡ್ ಹಿನ್ನೆಲೆಯಲ್ಲಿ ಗಣಪತಿ ಮೂರ್ತಿಗಳ ವಿಸರ್ಜನಾ ಪೂರ್ವ ಮೆರವಣಿಗೆಯನ್ನು ನಿರ್ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ನಡೆಸದಿರಲು ಹಿಂದೂ ಸಂಘಟನೆಗಳ ಮಹಾಮಂಡಳ ನಿರ್ಧರಿಸಿತ್ತು. ಅದರಂತೆ ಕೋಟೆ ಭೀಮೇಶ್ವರ ದೇವಸ್ಥಾನದಿಂದ ಗಣಪತಿ ಮೂರ್ತಿಯನ್ನು ಪಕ್ಕದ ತುಂಗಾ ನದಿಯಲ್ಲಿ ವಿಸರ್ಜಿಸಲಾಯಿತು.
ಯುವಕರು, ವಿವಿಧ ಸಂಘಟನೆಗಳ ಕಾರ್ಯಕರ್ತರು
ಹಿಂದೂ ಮಹಾಸಭಾ ಗಣಪತಿ ಮೂರ್ತಿಯನ್ನು ತುಂಗಾ ನದಿಯ ಭೀಮನ ಮಡುವಿನಲ್ಲಿ ವಿಸರ್ಜನೆ ಮಾಡಲಾಯಿತು. ಯುವಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೇರಿದ್ದರು. ವಿಸರ್ಜನೆ ವೇಳೆ ಜೈ ಶ್ರೀರಾಮ್, ಹರ ಹರ ಮಹಾದೇವ ಘೋಷಣೆಗಳನ್ನು ಕೂಗಿದರು.
ಇಲ್ಲಿದೆ ಗಣಪತಿ ವಿಸರ್ಜನೆಯ ಫೋಟೊ ಆಲ್ಬಂ
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200