ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ವಾಹನ ಸವಾರರಿಗೆ ಗೊತ್ತಿರಬೇಕು ಈ 8 ಪಾಯಿಂಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಹಿಂದೂ ಮಹಾಸಭಾ ಗಣಪತಿ (HINDU MAHASABHA GANAPATHI) ವಿಸರ್ಜನೆ ಹಿನ್ನೆಲೆ, ನಗರದಲ್ಲಿ ವಾಹನಗಳ ಸಂಚಾರದ ಮಾರ್ಗ (ROAD DIVERSION) ಬದಲಾವಣೆ ಮಾಡಲಾಗಿದೆ. ಸೆ.9ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ನಡೆಯಲಿದೆ.

ಅಂದು ಬೆಳಗ್ಗೆ ಕೋಟೆ ಶ್ರೀ ಭೀಮೇಶ್ವರ (KOTE BHEEMESHWARA) ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಲಿದೆ. ಎಸ್‍ಪಿಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯರಸ್ತೆ, ಶಿವಪ್ಪ ನಾಯಕ ಸರ್ಕಲ್, ಬಿ.ಹೆಚ್.ರಸ್ತೆ, ಎ.ಎ.ಸರ್ಕಲ್, ನೆಹರು ರಸ್ತೆ ಮುಖಾಂತರ ಮೆರವಣಿಗೆ ಸಾಗಲಿದೆ.

TODAY NEWS PARAGRAPH

ಗೋಪಿ ಸರ್ಕಲ್, ದುರ್ಗಿಗುಡಿ ಮುಖ್ಯರಸ್ತೆ, ಜೈಲ್ ಸರ್ಕಲ್, ಕುವೆಂಪು ರಸ್ತೆ ಮಾರ್ಗವಾಗಿ, ಶಿವಮೂರ್ತಿ ಸರ್ಕಲ್, ಸವಳಂಗ ಮುಖ್ಯರಸ್ತೆ, ಮಹಾವೀರ ಸರ್ಕಲ್, ಡಿವಿಎಸ್ ಸರ್ಕಲ್, ಕಾನ್ವೆಂಟ್ ರಸ್ತೆ, ಬಿ.ಹೆಚ್.ರಸ್ತೆ, ಪೊಲೀಸ್ ಕಾರ್ನರ್, ಕೋಟೆ ಪೊಲೀಸ್ ಠಾಣೆ ರಸ್ತೆ, ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನ ತಲುಪಲಿದೆ. ಬಳಿಕ ತುಂಗಾ ನದಿಯಲ್ಲಿ ಗಣಪತಿ ಮೂರ್ತಿಯನ್ನು ವಿಸರ್ಜನೆ ಮಾಡಲಾಗುತ್ತದೆ.

ಸುಗಮ ಸಂಚಾರಕ್ಕೆ ವ್ಯವಸ್ಥೆ

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆ ನಗರದಲ್ಲಿ ಸುಗಮ ಸಂಚಾರಕ್ಕಾಗಿ ವಾಹನಗಳ ನಿಲುಗಡೆ ಮತ್ತು ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

1) ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆ ನಿಷೇಧಿಸಲಾಗಿದೆ.

2) ಭದ್ರಾವತಿ, ಬೆಂಗಳೂರು ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ, ಎಲ್ಲಾ ಬಸ್‍ಗಳು ಮತ್ತು ಸಿಟಿ ಬಸ್‍ಗಳು ಹಾಗೂ ಕಾರುಗಳು ಎಂಆರ್‍ಎಸ್ ಸರ್ಕಲ್, ಬೈಪಾಸ್ ರಸ್ತೆ ಮುಖಾಂತರ ತೆರಳಬೇಕು.

3) ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್‍ಗಳು ಹೊಳೆಹೊನ್ನೂರು ಸರ್ಕಲ್, ಎಂಆರ್‍ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ತೆರಳಬೇಕು.

Shimoga Nanjappa Hospital

4) ಹೊನ್ನಾಳಿ, ಹರಿಹರ, ದಾವಣಗೆರೆಯಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್‍ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್, ಹೊಳೆಹೊನ್ನೂರು ಕ್ರಾಸ್, ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರವಾಗಿ ಹೋಗಬೇಕು.

5) ಕೋಟೆ ರಸ್ತೆ ಮತ್ತು ಓಲ್ಡ್ ಬಾರ್ ಲೈನ್ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

6) KSRTC ಮತ್ತು ಖಾಸಗಿ ಬಸ್‍ ನಿಲ್ದಾಣದಿಂದ ಶಿಕಾರಿಪುರ, ಸೊರಬ ಕಡೆ ಹೋಗುವ ಎಲ್ಲಾ ಬಸ್‍ಗಳು ಮತ್ತು ಭಾರೀ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್ – ಆಲ್ಕೊಳ ಸರ್ಕಲ್ -ಪೊಲೀಸ್ ಚೌಕಿ – ರಾಜ್‍ಕುಮಾರ್ ಸರ್ಕಲ್, ಬೊಮ್ಮನಕಟ್ಟೆ ಮುಖಾಂತರ ಸವಳಂಗ ರಸ್ತೆಗೆ ಹೋಗುವುದು.

7) KSRTC ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆಯ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗುವುದು.

8) ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Shimoga Nanjappa Hospital

ದನ್ನೂ ಓದಿ – ಹಿಂದೂ ಹರ್ಷ ಹತ್ಯೆ ಕೇಸ್, ಕೋರ್ಟ್’ಗೆ ಚಾರ್ಜ್ ಶೀಟ್, ಇಲ್ಲಿದೆ 5 ಪ್ರಮುಖಾಂಶ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment