SHIMOGA NEWS, 4 NOVEMBER 2024 : ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿರುವುದನ್ನು ಕೂಡಲೆ ರದ್ದು ಮಾಡಬೇಕು. ಇಲ್ಲವಾದಲ್ಲಿ ರಾಜ್ಯದಲ್ಲಿ ಸಾಧು, ಸಂತರ (Priest) ನೇತೃತ್ವದಲ್ಲಿ ರಕ್ತ ಕ್ರಾಂತಿ ಆಗಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ವಕ್ಫ್ ಆಸ್ತಿ ಎಂದು ರೈತರಿಗೆ ನೀಡಿರುವ ನೊಟೀಸ್ ಹಿಂಪಡೆಯಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ನೊಟೀಸ್ ಹಿಂಪಡೆಯುವುದು ಮುಖ್ಯವಲ್ಲ. ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿರುವುದನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
![]() |
ಸಿದ್ದರಾಮಯ್ಯ ಜಮೀರ್ ಅಹಮದ್ ಬಾಲ ಹಿಡಿದುಕೊಂಡು ಹೋದರೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತಾರೆ. ರೈತರು, ಸಾಧು, ಸಂತರ ಶಾಪಕ್ಕೆ ಗುರಿ ಆಗುತ್ತೀರ. ಹಿಂದೂಗಳು, ಮಠ – ಮಂದಿರಗಳ ಆಸ್ತಿ ಉಳಿಸಲು ಸಾಧು, ಸಂತರ ನೇತೃತ್ವದಲ್ಲಿ ರಕ್ತ ಕ್ರಾಂತಿ ಆಗಲಿದೆ.
ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ
ವಕ್ಫ್ ಆಸ್ತಿ ಎಂದು ರೈತರ ಭೂಮಿ ಕಬಳಿಸಿ ರಾಜ್ಯವನ್ನು ಇಸ್ಲಾಮಿಕರಣ ಮಾಡಲು ಹೊರಟಿದ್ದಾರೆ. ಹಾಗಾಗಿ ವಕ್ಫ್‌ಗೆ ಇರುವ ಪರಮೋಚ್ಛ ಅಧಿಕಾರವನ್ನು ಹಿಂದಕ್ಕೆ ಪಡೆಯಬೇಕು ಎಂದು ಕೇಂದ್ರ ಸರ್ಕಾರದ ಸಮಿತಿಗೆ ಪತ್ರ ಬರೆಯುತ್ತೇನೆ ಎಂದು ಆಗ್ರಹಿಸಿದರು.
ಬಸವರಾಜ ಬೊಮ್ಮಾಯಿ ಆಕಾಶದಿಂದ ಇಳಿದು ಬಂದವರಲ್ಲ. ವಕ್ಫ್ ಹೆಸರಿನಲ್ಲಿ ಆಸ್ತಿ ಕಬಳಿಸಲು ಮುಂದಾದವರೆಲ್ಲರು ದೇಶ ದ್ರೋಹಿಗಳೆ. ತಮಗೆ ಬೇಕಾದಂತೆ ಮುಸ್ಲಿಮರಿಗಾಗಿ ಆಸ್ತಿ ಕಬಳಿಸಿದರೆ ರಕ್ತ ಕ್ರಾಂತಿ ಆಗಲಿದೆ. ಮುಸ್ಲಿಮರು ಹುಲಿ ಬಾಯಿಗೆ ಕೈ ಹಾಕಿದ್ದಾರೆ. ಇದರಿಂದ ತಪ್ಪಿಸಿಕೊಳ್ಳುವುದು ಸುಲಭವಲ್ಲ.
ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ
ವಿವಿಧ ಸ್ವಾಮೀಜಿಗಳ ನೇತೃತ್ವದ ತಂಡ ನಾಳೆಯಿಂದ ಪ್ರವಾಸ ಕೈಗೊಳ್ಳಲಿದೆ. ಆ ಬಳಿಕ ಹೋರಾಟದ ರೂಪುರೇಷೆ ಸಿದ್ಧವಾಗಲಿದೆ ಎಂದು ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಎಂಎಲ್‌ಎ ಸೇರಿದಂತೆ ಹಲವರು ಪೊಲೀಸ್ ವಶಕ್ಕೆ
ತಕ್ಷಣ ಮೋದಿಯ ಕ್ಷಮೆಯಾಚಿಸಲಿ
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಸಲು ಆಗುತ್ತಿಲ್ಲ. ಇದನ್ನು ಮರೆಮಾಚಲು ವಿಶ್ವನಾಯಕ ನರೇಂದ್ರ ಮೋದಿ ವಿರುದ್ಧ ಹಗುರವಾಗಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ನಾಲಗೆ ಬಿಗಿ ಹಿಡಿದು ಮಾತನಾಡಬೇಕು. ತಕ್ಷಣ ಮೋದಿ ಅವರ ಕ್ಷಮೆಯಾಚಿಸಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200