ಶಿವಮೊಗ್ಗ: ಗಾಂಧಿ ಬಜಾರ್‌ನಲ್ಲು ಹಿಂದೂ ಮಹಾಸಭಾ ಗಣಪತಿಯ (Ganesh) ರಾಜಬೀದಿ ಉತ್ಸವ ಅದ್ಧೂರಿಯಾಗಿ ನಡೆಯಿತು. ದೊಡ್ಡ ಸಂಖ್ಯೆಯ ಜನರು ಈ ಬಾರಿ ಮೆರವಣಿಗೆಯಲ್ಲಿ ಪಾಲ್ಗೊಂಡು, ಗಣೇಶನ ದರ್ಶನ ಪಡೆದರು.
ಭಾರಿ ಸಂಖ್ಯೆಯ ಜನರು ಈ ಬಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಬಾರಿ ಮಹಿಳೆಯರು, ಕುಟುಂಬದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು ವಿಶೇಷ.
ಬಿಗಿ ಬಂದೋಬಸ್ತ್
ಗಾಂಧಿ ಬಜಾರ್‌ನಲ್ಲಿ ಈ ಬಾರಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಸುನ್ನಿ ಜಾಮಿಯ ಮಸೀದಿ ಮುಂಭಾಗ ಆರ್‌ಎಎಫ್, ಕೆಎಸ್‌ಆರ್‌ಪಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಇನ್ನು, ಶಾಸಕ ಎಸ್.ಎನ್.ಚನ್ನಬಸಪ್ಪ ಮಸೀದಿ ಮುಂಭಾಗ ನಿಂತು ಕಾರ್ಯಕರ್ತರನ್ನು ಮಾತನಾಡಿಸುತ್ತಿದ್ದರು.
ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ.ಗಾಂಧಿ ಬಜಾರ್ ಮುಖ್ಯರಸ್ತೆಗೆ ಹೊಂದಿಕೊಂಡಿರುವ ರಸ್ತೆಗಳನ್ನು ಬಂದ್ ಮಾಡಲಾಗಿತ್ತು.ಗಾಂಧಿ ಬಜಾರ್‌ನ ಸುನ್ನಿ ಜಾಮಿಯಾ ಮಸೀದಿ ಮುಂಭಾಗ ಎಸ್‌ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಭದ್ರತೆ ಪರಿಶೀಲನೆ.ಗಾಂಧಿ ಬಜಾರ್‌ನಲ್ಲಿ ದೊಡ್ಡ ಸಂಖ್ಯೆ ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.ಗಾಂಧಿ ಬಜಾರ್‌ನಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಎಫ್ ಪಡೆ.ಸುನ್ನಿ ಜಾಮಿಯಾ ಮಸೀದಿ ಮುಂಭಾಗ ಆರ್‌ಎಎಫ್ ನಿಯೋಜಿಸಲಾಗಿತ್ತು.ಕರ್ತವ್ಯ ನಿರತ ಆರ್‌ಎಎಫ್ ಪಡೆ ಸಿಬ್ಬಂದಿ.ಗಾಂಧಿ ಬಜಾರ್‌ನಲ್ಲಿ ಮಹಿಳೆಯರ ಘೋಷಣೆ, ನೃತ್ಯ.ಕೇಸರಿ ಶಾಲು ಹಿಡಿದು ಸಾಗಿದ ಯುವಕರು.ಧ್ವಜ ಬೀಸುತ್ತ, ಘೋಷಣೆ ಕೂಗುತ್ತ ಸಾಗಿದ ಮಕ್ಕಳು.ಜನರತ್ತ ಕೈ ಬೀಸಿದ ಶಾಸಕ ಚನ್ನಬಸಪ್ಪ, ಜೀಜಾಬಾಯಿ, ಶಿವಾಜಿ ವೇಷಧಾರಿ ಮಕ್ಕಳು. ಕೇಸರಿ ಶಾಲು ತಿರುಗಿಸುತ್ತ ಸಾಗಿದ ಯುವಕರು.ಶಾಸಕ ಎಸ್.ಎನ್.ಚನ್ನಬಸಪ್ಪ ಅವರನ್ನ ಹೆಗಲ ಮೇಲೆ ಹೊತ್ತು ಸಾಗಿದ ಯುವಕರು.ಹಿಂದೂ ಮಹಾಸಭಾಗ ಗಣಪತಿ ದರ್ಶನ ಪಡೆದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಕೆ.ಈ.ಕಾಂತೇಶ್.ಗಾಂಧಿ ಬಜಾರ್‌ನಲ್ಲಿ ಐಜಿಪಿ ರವಿಕಾಂತೇಗೌಡ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್.ಯುವಕರ ಗುಂಪನ್ನು ನಿಯಂತ್ರಿಸಿದ ಎಸ್‌ಎಎಫ್ ಮತ್ತು ಮಫ್ತಿಯಲ್ಲಿದ್ದ ಪೊಲೀಸರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ