ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜನವರಿ 2022
ಮಕ್ಕಳು, ಶಿಕ್ಷಕರಿಗೆ ಕರೋನ ಸೋಂಕು ತುತ್ತಾಗುತ್ತಿರುವ ಹಿನ್ನೆಲೆ ಶಿವಮೊಗ್ಗ ನಗರದ ಶಾಲೆಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ನಗರದ ಎಲ್ಲಾ ಶಾಲೆಗಳ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಬುಧವಾರದಿಂದ ಮೂರು ದಿನ ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು.
ಸೋಮವಾರದಿಂದ ಮತ್ತೆ ಶಾಲೆ
ಮೂರು ದಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಇರಲಿದೆ. ಹಾಗಾಗಿ ಸೋಮವಾರದಿಂದ ಪುನಃ ತರಗತಿಗಳು ಆರಂಭವಾಗಲಿದೆ.
200 ವಿದ್ಯಾರ್ಥಿಗಳಿಗೆ ಕರೋನ
ಶಿವಮೊಗ್ಗದಲ್ಲಿ ಮಕ್ಕಳಿಗೆ ಸೋಂಕು ತಗುಲುವ ಪ್ರಕರಣಗಳು ಹೆಚ್ಚಾಗಿವೆ. ಸುಮಾರು 45 ಶಾಲೆಯ 208 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಶಿವಮೊಗ್ಗ ನಗರದಲ್ಲಿ ಮಾತ್ರ ಶಾಲೆಗಳಿಗೆ ರಜೆ ಘೋಷಿಸಲಾಗುತ್ತಿದೆ. ಭಾನುವಾರ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.