SHIVAMOGGA LIVE NEWS | 12 SEPTEMBER 2023
SHIMOGA : ಅರಣ್ಯ ಇಲಾಖೆಯ ಶ್ರೀಗಂಧಕೋಠಿಯಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿ ಹುತಾತ್ಮರಿಗ ನಮನ (Homage) ಸಲ್ಲಿಸಿದರು.
ದೇಶ ರಕ್ಷಣೆಗಾಗಿ ಹೋರಾಡಿ ಪ್ರಾಣಾರ್ಪಣೆ ಮಾಡುವ ಸೈನಿಕನಿಗೆ ದೊರೆಯುವ ಗೌರವ, ದೇಶದ ಅಮೂಲ್ಯ ವನ್ಯ ಸಂಪತ್ತನ್ನು ರಕ್ಷಿಸುವ ಅರಣ್ಯ ಸಿಬ್ಬಂದಿ ಹಾಗೂ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸುವ ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರತರಾದಾಗ ಮೃತರಾದಾಗಲೂ ಅದೇ ರೀತಿಯ ಗೌರವ ಸೌಲಭ್ಯ ದೊರೆಯುವಂತಾಗಬೇಕು.ನ್ಯಾ. ಮಂಜುನಾಥ ನಾಯಕ್, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ

ಭಾರಿ ಪ್ರಮಾಣದಲ್ಲಿ ಕಾಡು ನಾಶಗೊಳಿಸಿ, ಕೃತಕವಾಗಿ ಮರಗಳನ್ನು ನೆಡುವುದರಿಂದ ಪರಿಸರ ಮತ್ತು ಅರಣ್ಯ ಸಂರಕ್ಷಿಸಿದಂತಾಗಲಿದೆ ಎಂದು ಅನೇಕರು ತಪ್ಪು ಅಭಿಪ್ರಾಯ ಹೊಂದಿದ್ದಾರೆ. ಇದು ಸಲ್ಲದು. ಇರುವ ಅರಣ್ಯವನ್ನು ಅದು ಇರುವಂತಹ ರೀತಿಯಲ್ಲಿಯೇ ಉಳಿಸಿ, ಬೆಳೆಸಿಕೊಂಡು ಹೋಗುವ ಅನಿವಾರ್ಯತೆ ಎದುರಾಗಿದೆ.ಡಾ. ಆರ್.ಸೆಲ್ವಮಣಿ, ಜಿಲ್ಲಾಧಿಕಾರಿ
ಮನುಷ್ಯನ ಅವ್ಯಾಹತ ದಾಳಿಯಿಂದಾಗಿ ಅರಣ್ಯಗಳು ದಿನೇ ದಿನೆ ನಾಶಗೊಳ್ಳುತ್ತಿವೆ. ಮನುಷ್ಯನ ಆಸೆಗೆ ಮಿತಿಯಿಲ್ಲದಂತಾಗಿದೆ. ಇದರಿಂದಾಗಿ ಅರಣ್ಯದಲ್ಲಿನ ಅಸಂಖ್ಯಾತ ಮರಗಳು, ಪ್ರಾಣಿ ಪಕ್ಷಿ ಸಂಕುಲದ ನಿರಂತರ ದಾಳಿಗೆ ತುತ್ತಾಗುತ್ತಿದೆ. ಇದರ ನಿಯಂತ್ರಣ ಅನಿವಾರ್ಯವಾಗಿದೆ. ಇಂತಹ ಸಂದಿಗ್ಧ ಸಂದರ್ಭ ಅರಣ್ಯ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಮಾಜಿಕ ಭದ್ರತೆ, ಶಾಂತಿಪಾಲನೆ, ಅರಣ್ಯ ಸಂರಕ್ಷಣೆ ಗಡಿರಕ್ಷಣೆಗೆ ಸಮನಾದ ಕಾರ್ಯವಾಗಿದೆ.ಮಿಥುನ್ ಕುಮಾರ್, ಜಿಲ್ಲಾ ರಕ್ಷಣಾಧಿಕಾರಿ

ಹೆಚ್ಚುತ್ತಿರುವ ಜನಸಂಖ್ಯೆಯು ಭೂಮಿ, ಅರಣ್ಯ, ಸಸ್ಯ ಮತ್ತು ಪ್ರಾಣಿ ಸಂಕುಲದ ನಾಶಕ್ಕೆ ಕಾರಣವಾಗುತ್ತಿದೆ. ಎಲ್ಲರು ಅರಿತು ಅರಣ್ಯ ರಕ್ಷಣೆಗೆ ಮುಂದಾಗಬೇಕು. ಅರಣ್ಯ ರಕ್ಷಕರು ಕೂಡ ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು.ಡಾ. ಕೆ.ಟಿ.ಹನುಮಂತಪ್ಪ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ನೇಹಿತೆಗಾಗಿ ಬಸ್ಸಿನಿಂದ ಕೆಳಗಿಳಿದು ಪ್ಲಾಟ್‌ಫಾರಂನಲ್ಲಿ ಕುಳಿತಿದ್ದ ಮಹಿಳೆಗೆ ಕಾದಿತ್ತು ಶಾಕ್
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿ, ಸಿಬ್ಬಂದಿ, ಹುತಾತ್ಮರಿಗೆ ಪುಷ್ಪ ಗುಚ್ಛವಿಟ್ಟು ಗೌರವ ಸಲ್ಲಿಸಿದರು.
ಇದನ್ನೂ ಓದಿ – ಕೆಲಸ ಹುಡುಕ್ತಿರೋರಿಗೆ ಗುಡ್ ನ್ಯೂಸ್, ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ, 5 ಸಾವಿರ ಕೆಲಸ ಇದೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
shivamoggalive@gmail.com
» Whatsapp Number
7411700200
