ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಆಗಸ್ಟ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸೈಬರ್ ಅಪರಾಧ, ರೌಡಿಸಂ, ಮಾದಕ ವಸ್ತುಗಳು, ರಿಯಲ್ ಎಸ್ಟೇಟ್ ದಂಧೆಕೋರರಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ. ಈ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಲಾಗಿದೆ.
ಶಿವಮೊಗ್ಗದಲ್ಲಿ ಇವತ್ತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಸೈಬರ್ ಕ್ರೈಮ್ ವಿಭಾಗವನ್ನು ಬಲಪಡಿಸಲಾಗುತ್ತಿದೆ. ಅತ್ಯಾಧುನಿಕ ತಂತ್ರಾಂಶಗಳು, ಸಾಧನಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇನ್ಫೋಸಿಸ್ ಸಂಸ್ಥೆಯ ನೆರವು
ರಾಜ್ಯದ ಪೊಲೀಸರಿಗೆ ಸೈಬರ್ ಕ್ರೈಮ್ ನಿಗ್ರಹಕ್ಕೆ ಇನ್ಫೋಸಿಸ್ ಸಂಸ್ಥೆ ನೆರವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸೈಬರ್ ಕ್ರೈಮ್ ಕಡಿವಾಣ ಹಾಕುವ ಸಂಬಂಧ ರಾಜ್ಯದ ಪೊಲೀಸರಿಗೆ ತರಬೇತಿ ನೀಡಲಾಗುತ್ತಿದೆ. ಹೊರ ರಾಜ್ಯದ ಪೊಲೀಸರು ಇಲ್ಲಿ ಬಂದು ತರಬೇತಿ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ರೌಡಿಸಂ, ರಿಯಲ್ ಎಸ್ಟೇಟ್, ಮಾದಕ ವಸ್ತು
ಬೆಂಗಳೂರಿನಲ್ಲಿ ರೌಡಿಸಂ ಮಟ್ಟಹಾಕಲು ಪೊಲೀಸರಿಗೆ ಖಡಕ್ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಹಗಲು, ರಾತ್ರಿ ಕೆಲಸ ಮಾಡುತ್ತಿದ್ದಾರೆ. ರೌಡಿಗಳ ಮನೆಗಳಿಗೆ ರೇಡ್ ಮಾಡಲಾಗಿದೆ. ಆದರೂ ಕೆಲವರು ಅಲ್ಲಲ್ಲಿ ಕೃತ್ಯ ಎಸಗುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಅಲ್ಲದೆ ಮಾದಕ ವಸ್ತು ಜಾಲ ಭೇದಿಸಲು ಯೋಜಿಸಲಾಗಿದೆ. ಇನ್ನು, ಯಾರದ್ದೋ ಸೈಟಿಗೆ ಬೇಲಿ ಹಾಕಿ ಸಮಸ್ಯೆ ಉಂಟು ಮಾಡುತ್ತಿರುವ ರಿಯಲ್ ಎಸ್ಟೇಟ್ ದಂಧೆಕೋರರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

ಅಫ್ಘಾನ್’ನಲ್ಲಿರುವ ಕನ್ನಡಿಗರಿಗೆ ನೆರವು
ಇನ್ನು, ತಾಲಿಬಾನ್ ಹಿಡಿತದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಈ ಜವಾಬ್ದಾರಿ ವಹಿಸಿಕೊಂಡಿದೆ. ಕೇಂದ್ರದೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ. ಸಿಒಡಿಯ ಪ್ರಮುಖ ಅಧಿಕಾರಿ ಉಮೇಶ್ ಅವರನ್ನು ನೇಮಿಸಿದ್ದೇವೆ. ಈ ಹಿಂದೆ ಕೂಡ ಹಲವು ದೇಶದಲ್ಲಿ ಅವರು ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ತೀರ್ಥಹಳ್ಳಿ ಮೂಲದ ಪಾದ್ರಿ ಸೇರಿದಂತೆ ಎಲ್ಲರನ್ನು ರಕ್ಷಿಸುತ್ತೇವೆ ಎಂದು ತಿಳಿಸಿದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





