SHIVAMOGGA LIVE NEWS | 30 NOVEMBER 2023
SHIMOGA : ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಬಿ.ವೈ.ವಿಜಯೇಂದ್ರ (B.Y.Vijayendra) ಅವರಿಗೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಪ್ರೇರಣಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
![]() |
ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?
ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ : ಇವತ್ತು ವಿಧಾನಸಭೆ ಚುನಾವಣೆ ನಡೆದರೆ 135ಕ್ಕಿಂತಲೂ ಹೆಚ್ಚು ಸೀಟ್‌ಗಳನ್ನು ಬಿಜೆಪಿ ಗೆಲ್ಲಲಿದೆ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗುತ್ತಾರೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಅಧ್ಯಕ್ಷರಾದ ಬಳಿಕ ರಾಜ್ಯದ ಉದ್ದಗಲಕ್ಕೆ ಉತ್ತಮ ಸ್ವಾಗತ ಸಿಗುತ್ತಿದೆ. ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ ತುಳುಕುತ್ತಿದೆ.
ಇದನ್ನೂ ಓದಿ- ದೀವರ ಸಾಂಸ್ಕೃತಿಕ ವೈಭವ, ಮೂವರಿಗೆ ಪ್ರಶಸ್ತಿ, ದೊಡ್ಡ ಸಮಾವೇಶದ ದಿನಾಂಕ ಪ್ರಕಟಿಸಿದ ಮಿನಿಸ್ಟರ್
ಬಿ.ವೈ.ರಾಘವೇಂದ್ರ, ಶಿವಮೊಗ್ಗ ಸಂಸದ : ನರೇಂದ್ರ ಮೋದಿ ಅವರು ಪುನಃ ಪ್ರಧಾನಿ ಆಗಬೇಕಿದೆ. ಈ ಹಿನ್ನೆಲೆ ನಮ್ಮ ರಾಜ್ಯದಿಂದ 28ಕ್ಕೆ 28 ಸ್ಥಾನಗಳಲ್ಲು ಬಿಜೆಪಿ ಗೆಲ್ಲಬೇಕಿದೆ. ಪಕ್ಷ ಅವಕಾಶ ಕೊಟ್ಟಿದೆ. ವಿಜಯೇಂದ್ರ ಅದನ್ನು ನಿಭಾಯಿಸುತ್ತಾರೆ.
ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ : ವಿಜಯೇಂದ್ರ ಹೆಸರು ಘೋಷಿಸಿದಾಗ ರಾಜ್ಯದಲ್ಲಿ ಮಿಂಚಿನ ಸಂಚಾರವಾಯಿತು. ಬಿಜೆಪಿಯಲ್ಲಿ ಲಿಂಗಾಯತರನ್ನು ತುಳಿಯಲಾಗುತ್ತಿದೆ ಎಂದು ಹೇಳುತ್ತಿದ್ದ ಕಾಂಗ್ರೆಸ್‌ನವರಿಗೆ ಈಗ ಟೀಕೆ ಮಾಡಲು ವಿಷಯವೇ ಇಲ್ಲದಾಗಿದೆ. ವಿಜಯೇಂದ್ರ ನೇಮಕ ವಿಚಾರವಾಗಿ ಪಕ್ಷದಲ್ಲಿ ನಾಲ್ಕೈದು ಜನ ಸ್ವಲ್ಪ ಅಸಮಾಧಾನ ವ್ಯಕ್ತಪಡಿಸಿದ್ದು ನಿಜ. ಒಂದು ಕೋಟಿ ಕಾರ್ಯಕರ್ತರಲ್ಲಿ ಆ ಐದು ಜನರನ್ನು ಸಮಾಧಾನ ಮಾಡುವ ವ್ಯವಸ್ಥೆ ನಮ್ಮಲ್ಲಿದೆ.
ಇದನ್ನೂ ಓದಿ- ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳಿಗೆ ನೀರು ತುಂಬಿಸಿʼ, ಮಿನಿಸ್ಟರ್ ಸೂಚನೆ
ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ : ಜನರು ವಿಜಯೇಂದ್ರನಲ್ಲಿ ಯಡಿಯೂರಪ್ಪ ಅವರನ್ನು ಕಾಣುತ್ತಿದ್ದಾರೆ. ಹಿರಿಯರು ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಮುಂದೆ ರಾಜ್ಯದ ಯಾವೊಬ್ಬ ಕಾರ್ಯಕರ್ತನು ತಲೆತಗ್ಗಿಸದ ಹಾಗೆ ಸಮಾನ್ಯ ಕಾರ್ಯಕರ್ತನಾಗಿ ಹೆಗಲಿಗೆ ಹೆಗಲು ಕೊಟ್ಟು ದುಡಿಯುತ್ತೇನೆ.
ಕಾರ್ಯಕ್ರಮದಲ್ಲಿ ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಭಾರತಿ ಶೆಟ್ಟಿ, ಮಾಜಿ ಶಾಸಕರಾದ ಹರತಾಳು ಹಾಲಪ್ಪ, ಬಿ.ಸ್ವಾಮಿರಾವ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಎಂ.ಬಿ.ಭಾನುಪ್ರಕಾಶ್, ಆರ್.ಕೆ.ಸಿದ್ರಾಮಣ್ಣ ಸೇರಿದಂತೆ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200