ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಮತ್ತೆ ಸಂಕಷ್ಟ, ತಲೆ ಮೇಲೆ ಕೈ ಹೊತ್ತ ಜನ, ಅಧಿಕಾರಿಗಳ ವಿರು‍ದ್ಧ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 20 JUNE 2023

SHIMOGA : ಒಂದು ಗಂಟೆ ಸುರಿದ ಮಳೆಗೆ ಪುನಃ ಹೊಸಮನೆ ಬಡಾವಣೆಯಲ್ಲಿ ರಾಜ ಕಾಲುವೆ ಉಕ್ಕಿ ಹರಿದಿದೆ. ರಸ್ತೆ ಮೇಲೆ ನೀರು ಹರಿದು, ಮನೆಗಳಿಗೆ ನುಗ್ಗಿದೆ (Flooded). ಇದರಿಂದ ಮನೆಯಲ್ಲಿದ್ದ ಹಲವು ವಸ್ತುಗಳು ಹಾನಿಗೀಡಾಗಿವೆ.

Hosamane-flooded-with-drainage-water-due-to-rain

ಇವತ್ತು ಮಧ್ಯಾಹ್ನ ಶಿವಮೊಗ್ಗದಲ್ಲಿ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯಿತು. ಈ ವೇಳೆ ಹೊಸಮನೆ ಬಡಾವಣೆಯಲ್ಲಿ ಹಾದು ಹೋಗುವ ರಾಜ ಕಾಲುವೆ ತುಂಬಿ ಹರಿದಿದೆ (Flooded). ಇದರಿಂದ ಚರಂಡಿ ನೀರು ರಾಜಕಾಲುವೆಗೆ ಸೇರದೆ ರಸ್ತೆಗೆ ಬಂದಿದೆ. ಕೆಲವೆ ಹೊತ್ತಿನಲ್ಲಿ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿದೆ. ಮನೆ ಸದಸ್ಯರು ನೀರನ್ನು ಹೊರಗೆ ಹಾಕುವಷ್ಟರಲ್ಲಿ ಹೈರಾಣಾದರು.

h3

ಬಡಾವಣೆಯಲ್ಲಿರುವ ಸುಮಾರು 80 ಮನೆಗಳಿಗೆ ನೀರು ನುಗ್ಗಿದೆ ಎಂದು ಹೇಳಲಾಗುತ್ತಿದೆ. ಮನೆಯಲ್ಲಿದ್ದ ದಿನಸಿ ಸೇರಿದಂತೆ ಹಲವು ವಸ್ತುಗಳು ನೀರಿನಿಂದ ಹಾನಿಗೀಡಾಗಿವೆ. ಇನ್ನು, ವಿಚಾರ ತಿಳಿದು ಕಾಂಗ್ರೆಸ್‌ ನಾಯಕ ಕೆ.ರಂಗನಾಥ್‌, ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜೆಸಿಬಿ ಮೂಲಕ ರಾಜ ಕಾಲುವೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಿಸಿದರು.

h4

ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದು ಗಂಟೆ ಸುರಿದ ಮಳೆ, ವಿವಿಧೆಡೆ ರಸ್ತೆಗಳು ಜಲಾವೃತ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ಪ್ರತಿ ಬಾರಿ ನಗರದಲ್ಲಿ ಜೋರು ಮಳೆಯಾದಾಗ ಹೊಸಮನೆ ಬಡಾವಣೆಯಲ್ಲಿ ರಾಜಕಾಲುವೆ ಉಕ್ಕಿ ಹರಿದು ಮನೆಗಳಿಗೆ ಕೊಳಚೆ ನೀರು ನುಗ್ಗುತ್ತಿದೆ. ಈ ಬಾರಿ ಸ್ಮಾರ್ಟ್‌ ಸಿಟಿ ಕಾಮಗಾರಿ ನಡೆಸಿದ್ದು ಈ ಸಮಸ್ಯೆ ಉದ್ಭವಿಸಲ್ಲ ಎಂದು ಅಧಿಕಾರಿಗಳು ಭರವಸೆ ನೀಡಿದ್ದರು.

PARISHRAMA NEET ACADEMY SHIVAMOGGA LIVE

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 20, 2023

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment