ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂದಿನ ಒಂದು ವರ್ಷದ ಒಳಗಾಗಿ 164 ಪೌರ ಕಾರ್ಮಿಕರಿಗೆ ಮನೆಗಳನ್ನು ಹಾಗೂ ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಸಮುದಾಯ ಭವನ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಸಿದ್ದೇಶ್ವರ ನಗರದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಹಾಗೂ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಪೌರ ಕಾರ್ಮಿಕರಿಗೆ ಮನೆ ನಿರ್ಮಾಣಕ್ಕಾಗಿ 6 ಎಕರೆ ಜಮೀನು ಗುರುತಿಸಲಾಗಿದ್ದು, ತಕ್ಷಣ ನಿರ್ಮಾಣ ಕಾಮಗಾರಿ ಪ್ರಾರಂಭವಾಗಬೇಕು. ಪೌರ ಕಾರ್ಮಿಕರಿಗೆ ಮನೆಯನ್ನು ಒದಗಿಸುವ ವಿಶಿಷ್ಟ ಯೋಜನೆ ಇದಾಗಿದ್ದು, ಇಡೀ ರಾಜ್ಯಕ್ಕೆ ಇದು ಮಾದರಿಯಾಗಿದೆ ಎಂದು ಹೇಳಿದರು.
ಮನೆಗಳ ನಿರ್ಮಾಣದಿಂದಾಗಿ ಇಡೀ ಊರನ್ನು ಸ್ವಚ್ಛಗೊಳಿಸುವಂತಹ ಮಹಾನ್ ಕಾಯಕ ಮಾಡುವ ಪೌರಕಾರ್ಮಿಕರಿಗೆ ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಲಿದೆ. ಪೌರಕಾರ್ಮಿಕರಿಗೆ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ ಎಂದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಗಾಂಧಿ ಜಯಂತಿ ದಿನದಂದು ಪೌರ ಕಾರ್ಮಿಕರ ಮನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಅವಕಾಶ ಒದಗಿರುವುದು ಅರ್ಥಪೂರ್ಣವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ ದಿನ ನಿಜವಾದ ಸ್ವಾತಂತ್ರ್ಯ ಎಂಬ ಗಾಂಧೀಜಿ ಅವರ ನುಡಿ ಇಂದು ಸಾಕಾರವಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಪ್ರಸನ್ನ ಕುಮಾರ್, ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಕಾರ್ಪೊರೇಟರ್‍ಗಳಾದ ಚನ್ನಬಸಪ್ಪ, ನಾಗರಾಜ ಕಂಕಾರಿ, ಯೋಗೀಶ್ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422