ಮನೆ ಬಾಗಿಲು ಹಾಕಿದಂತೆಯೇ ಇತ್ತು, ರೂಮಿಗೆ ಹೋದಾಗ ಮಾಲೀಕನ ಕುಟುಂಬಕ್ಕೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 MAY 2023

SHIMOGA : ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಡುಗೆ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ (THEFT) ಮಾಡಲಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Crime-News-General-Image

ಶಿವಮೊಗ್ಗದ ಶರಾವತಿ ನಗರದ ಮಂಜುನಾಥ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮಂಜುನಾಥ ಅವರು ಕುಟುಂಬ ಸಹಿತ ತಮ್ಮ ಸಹೋದರನ ಮಗನ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅರಸೀಕೆರೆಗೆ ತೆರಳಿದ್ದರು. ಈ ವೇಳೆ ಕಳ್ಳತನವಾಗಿದೆ (THEFT).

 Admission Open for 2023-2024 | ವಿಡಿಯೋ ನೋಡಿ  

ಅಡುಗೆ ಮನೆ ಬಾಗಿಲು ಮುರಿದು ಕೊಠಡಿಯಲ್ಲಿದ್ದ ಬೀರುವಿನಲ್ಲಿ ಬಾಗಿಲಿನ ಲಾಕ್‌ ಒಡೆದು ಕಳ್ಳತನ ಮಾಡಲಾಗಿದೆ. 255 ಗ್ರಾಂ ತೂಕದ ಬಂಗಾರದ ಆಭರಣಗಳು, 2.45 ಲಕ್ಷ ರೂ. ನಗದು ಹಣ ಕಳ್ಳತನವಾಗಿದೆ. ಮದುವೆ ಮುಗಿಸಿ ಮನೆಗೆ ಮರಳಿದಾಗ ಕೃತ್ಯ ಬೆಳಕಿಗೆ ಬಂದಿದೆ. ಮನೆಯ ಕೊಠಡಿಯಲ್ಲಿ ಬಟ್ಟೆಯಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಹಾಗಾಗಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ – ತೋಟಕ್ಕೆ ಹೋಗುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ, ಗಂಭೀರ ಗಾಯ

ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment