ಕ್ರಿಶ್ಚಿಯನ್‌ ಸಮುದಾಯದ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ, ಅರ್ಜಿ ಆಹ್ವಾನ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ಅರಿವು ಶೈಕ್ಷಣಿಕ ಸಾಲ (Education Loan) ಯೋಜನೆಯಡಿ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲಿಚ್ಛಿಸುವ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಸಿಇಟಿ (CET) ಅಥವಾ ಎನ್‌ಇಇಟಿ (NEET) ಮೂಲಕ ಆಯ್ಕೆಯಾಗಿ ವೃತ್ತಿಪರ ಕೋರ್ಸ್‌ಗಳಿಗೆ ಸೇರಬಯಸುವ ಹೊಸ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳು ಈ ಸೌಲಭ್ಯದ ಪ್ರಯೋಜನ ಪಡೆಯಬಹುದು.

Just-Mahithi-Update-Shimoga-News

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ವಿದ್ಯಾರ್ಥಿಗಳು ನಿಗಮದ ಅಧಿಕೃತ ವೆಬ್‌ಸೈಟ್ www.kccdconline.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಬೇಕು. ನಂತರ ಆ ಅರ್ಜಿಯ ಪ್ರಿಂಟೌಟ್ ಜೊತೆಗೆ ಎಸ್‌ಎಸ್‌ಎಲ್‌ಸಿ (SSLC) ಮತ್ತು ಪಿಯುಸಿ (PUC) ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಭಾವಚಿತ್ರ ಹಾಗೂ ಸಿಇಟಿ/ಎನ್‌ಇಇಟಿ ಪ್ರವೇಶ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು.

ಭರ್ತಿ ಮಾಡಿದ ದಾಖಲಾತಿಗಳ ಪ್ರತಿಯನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಅಚ್ಯುತರಾವ್‌ ಲೇಔಟ್, 4ನೇ ತಿರುವು, ನಂಜಪ್ಪ ಆಸ್ಪತ್ರೆ ಮುಂಭಾಗ, ಶಿವಮೊಗ್ಗ ಇಲ್ಲಿಗೆ ಖುದ್ದಾಗಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಕಚೇರಿಯ ದೂರವಾಣಿ ಸಂಖ್ಯೆ: 08182-228262 ಅನ್ನು ಸಂಪರ್ಕಿಸಬಹುದಾಗಿದೆ.