ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 24 AUGUST 2023
SHIMOGA : ಮಹಿಳೆಯರಿಗೆ ಉಚಿತ ಬಸ್ (Free Bus) ಪ್ರಯಾಣದ ಶಕ್ತಿ ಯೋಜನೆಗೆ (Shakti) ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯೋಜನೆ ಜಾರಿಯಾದಾಗಿನಿಂದ ಈವರೆಗೆ ಶಿವಮೊಗ್ಗ ವಿಭಾಗದಲ್ಲಿ 53 ಲಕ್ಷ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ.
ಜೂ.11ರಂದು ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿತು. ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಯಿತು. ಯೋಜನೆ ಜಾರಿ ಬೆನ್ನಿಗೆ ಶಿವಮೊಗ್ಗ ವಿಭಾಗದ (KSRTC) ವ್ಯಾಪ್ತಿಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ.
53 ಲಕ್ಷ ಮಹಿಳಾ ಪ್ರಯಾಣಿಕರು
ಯೋಜನೆ ಜಾರಿಯಾದ ಬಳಿಕ ಜುಲೈ ತಿಂಗಳಲ್ಲಿ 24,01,146 ಮಹಿಳೆಯರು , ಆಗಸ್ಟ್ ತಿಂಗಳಲ್ಲಿ 22ರವರೆಗೆ 16,64,330 ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣಿಸಿದ್ದಾರೆ. ಇದರ ಒಟ್ಟು ವೆಚ್ಚ 17,34,40,923 ರೂ. ಆಗಿದೆ. ಈ ವೆಚ್ಚವನ್ನು ಸರ್ಕಾರ ಸಾರಿಗೆ ನಿಗಮಕ್ಕೆ ಭರಿಸಬೇಕಿದೆ.
ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸಲು ಮಹಿಳೆಯರಿಗೆ ಶಕ್ತಿ ಕಾರ್ಡ್ ನೀಡಲು ಸರ್ಕಾರ ಯೋಜಿಸಿದೆ. ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವವರೆಗೆ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಡ್ರೈವಿಂಗ್ ಲೈಸೆನ್ಸ್, ರಾಜ್ಯ ಮತ್ತು ಕೇಂದ್ರ ಸರ್ಕಾರ ವಿತರಿಸಿರುವ ಯಾವುದಾದರು ಗುರುತಿನ ಚೀಟಿಯನ್ನು ಕಂಡಕ್ಟರ್‌ಗೆ ತೋರಿಸಬೇಕು. ರಾಜ್ಯದ ಒಳಗೆ ಪ್ರಯಾಣಿಸಲು ಮಾತ್ರ ಶಕ್ತಿ ಯೋಜನೆ ಅನ್ವಯವಾಗಲಿದೆ.
ಇದನ್ನೂ ಓದಿ – ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯಿಂದ ಠಾಣೆಗೆ ದೂರು | 3 ಫಟಾಫಟ್ ನ್ಯೂಸ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422