Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಮಹಿಳೆಯರಿಗೆ ಉಚಿತ ಪ್ರಯಾಣ, ಶಿವಮೊಗ್ಗದಲ್ಲಿ ಭರ್ಜರಿ ರೆಸ್ಪಾನ್ಸ್‌, ಈತನಕ ಎಷ್ಟು ಮಂದಿ ಓಡಾಡಿದ್ದಾರೆ?

ಮಹಿಳೆಯರಿಗೆ ಉಚಿತ ಪ್ರಯಾಣ, ಶಿವಮೊಗ್ಗದಲ್ಲಿ ಭರ್ಜರಿ ರೆಸ್ಪಾನ್ಸ್‌, ಈತನಕ ಎಷ್ಟು ಮಂದಿ ಓಡಾಡಿದ್ದಾರೆ?

24/08/2023 6:19 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 24 AUGUST 2023

SHIMOGA : ಮಹಿಳೆಯರಿಗೆ ಉಚಿತ ಬಸ್‌ (Free Bus) ಪ್ರಯಾಣದ ಶಕ್ತಿ ಯೋಜನೆಗೆ (Shakti) ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯೋಜನೆ ಜಾರಿಯಾದಾಗಿನಿಂದ ಈವರೆಗೆ ಶಿವಮೊಗ್ಗ ವಿಭಾಗದಲ್ಲಿ 53 ಲಕ್ಷ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಜೂ.11ರಂದು ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿತು. ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಯಿತು. ಯೋಜನೆ ಜಾರಿ ಬೆನ್ನಿಗೆ ಶಿವಮೊಗ್ಗ ವಿಭಾಗದ (KSRTC) ವ್ಯಾಪ್ತಿಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ.

53 ಲಕ್ಷ ಮಹಿಳಾ ಪ್ರಯಾಣಿಕರು

ಯೋಜನೆ ಜಾರಿಯಾದ ಬಳಿಕ ಜುಲೈ ತಿಂಗಳಲ್ಲಿ 24,01,146 ಮಹಿಳೆಯರು , ಆಗಸ್ಟ್‌ ತಿಂಗಳಲ್ಲಿ 22ರವರೆಗೆ 16,64,330 ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣಿಸಿದ್ದಾರೆ. ಇದರ ಒಟ್ಟು ವೆಚ್ಚ 17,34,40,923 ರೂ. ಆಗಿದೆ. ಈ ವೆಚ್ಚವನ್ನು ಸರ್ಕಾರ ಸಾರಿಗೆ ನಿಗಮಕ್ಕೆ ಭರಿಸಬೇಕಿದೆ.

Shakthi Yojane Conductor issuing ticket

ಯೋಜನೆ ಅನುಷ್ಟಾನದ ನಂತರ ನೂಕು ನುಗ್ಗಲು, ಅಹಿತಕರ ಘಟನೆ ತಪ್ಪಿಸಲು ಸೂಪರ್‌ವೈಸರ್‌ಗಳನ್ನು ನಿಯೋಜಿಸಲಾಗಿದೆ. ಜಾತ್ರೆ, ಹಬ್ಬದ ದಿನಗಳನ್ನು ಗುರುತಿಸಿ ಪ್ರಯಾಣಿಕರ ಸಂದಣಿಗೆ ಅನುಗುಣವಾಗಿ ಘಟಕದಿಂದ ಹೆಚ್ಚುವರಿ ಬಸ್ಸುಗಳ ತ್ವರಿತ ನಿಯೋಜನೆ, ಹೆಚ್ಚುವರಿ ಸಿಬ್ಬಂದಿಗಳ ನಿಯೋಜಿಸಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.ವಿಜಯಕುಮಾರ್, ವಿಭಾಗೀಯ ನಿಯಂತ್ರಕರು, ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗ

ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸಲು ಮಹಿಳೆಯರಿಗೆ ಶಕ್ತಿ ಕಾರ್ಡ್‌ ನೀಡಲು ಸರ್ಕಾರ ಯೋಜಿಸಿದೆ. ಸ್ಮಾರ್ಟ್‌ ಕಾರ್ಡ್‌ ವಿತರಣೆ ಮಾಡುವವರೆಗೆ ಆಧಾರ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ, ಡ್ರೈವಿಂಗ್‌ ಲೈಸೆನ್ಸ್‌, ರಾಜ್ಯ ಮತ್ತು ಕೇಂದ್ರ ಸರ್ಕಾರ ವಿತರಿಸಿರುವ ಯಾವುದಾದರು ಗುರುತಿನ ಚೀಟಿಯನ್ನು ಕಂಡಕ್ಟರ್‌ಗೆ ತೋರಿಸಬೇಕು. ರಾಜ್ಯದ ಒಳಗೆ ಪ್ರಯಾಣಿಸಲು ಮಾತ್ರ ಶಕ್ತಿ ಯೋಜನೆ ಅನ್ವಯವಾಗಲಿದೆ.

ಇದನ್ನೂ ಓದಿ – ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯಿಂದ ಠಾಣೆಗೆ ದೂರು | 3 ಫಟಾಫಟ್‌ ನ್ಯೂಸ್‌

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article ADIKE-RATE-SHIVAMOGGA-LIVE-NEWS ಅಡಿಕೆ ಧಾರಣೆ | 24 ಆಗಸ್ಟ್‌ 2023 | ಎಲ್ಲೆಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌?
Next Article KL-Shivani-daughter-of-Konanduru-Lingappa-in-ISRO-Chandrayana-3 ಚಂದ್ರಯಾನ 3 ಯೋಜನೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿಜ್ಞಾನಿ, ಇವರು ಮಾಜಿ ‌MLA ಪುತ್ರಿ, JNNCE ವಿದ್ಯಾರ್ಥಿನಿ

ಇದನ್ನೂ ಓದಿ

130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Savirada-Vachana-in-Shimoga-city.
SHIVAMOGGA CITY

ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/05/2025
Shimoga-Freedom-Park
SHIVAMOGGA CITY

ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಸಾರ್ವಜನಿಕ ಪ್ರವೇಶ ನಿರ್ಬಂಧ, ಯಾವ ಸಮಯದಲ್ಲಿ ನಿರ್ಬಂಧ? ಯಾಕೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?