ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 03 FEBRUARY 2021
ಹುಣಸೋಡು ಸ್ಪೋಟದಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಜಲ್ಲಿಕ್ರಶರ್, ಕಲ್ಲುಕ್ವಾರಿ ಸಮೀಪದಲ್ಲೇ ಇರುವ ಹುಣಸೋಡು, ಹೊಸೂರು, ಅಬ್ಬಲಗೆರೆ, ಬಸವನಗಂಗೂರು, ಗೆಜ್ಜೇನಹಳ್ಳಿ, ಹನುಮಂತ ನಗರ, ಜಕಾತಿಕೊಪ್ಪ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಮನೆಗಳ ಗೋಡೆಗಳು ಬಿರುಕುಬಿಟ್ಟಿವೆ. ಕೆಲ ಮನೆಗಳ ಛಾವಣಿ ಹಾಳಾಗಿದ್ದು, ಕೆಲವು ಮನೆಗಳ ಟೀವಿ, ಎಲೆಕ್ಟ್ರಾನಿಕ್ ಉಪಕರಣ ಸ್ಪೋಟದಿಂದ ಹಾನಿಗೊಳಗಾಗಿವೆ ಎಂದರು.
ಜಿಲ್ಲಾಡಳಿತ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ಲಕ್ಷ್ಯದಿಂದ ತಮ್ಮದಲ್ಲದ ತಪ್ಪಿನಿಂದ, ನೂರಾರು ಗ್ರಾಮಸ್ಥರು, ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ಸ್ಪೋಟ ಸಂಭವಿಸಿ 10 ರಿಂದ 12 ದಿನಗಳಾದರೂ ಅಧಿಕಾರಿಗಳು ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿಲ್ಲ. ಗ್ರಾಮಸ್ಥರಿಗಾದ ನಷ್ಟದ ಬಗ್ಗೆ ಪರಿಶೀಲಿಸುವುದಾಗಲೀ, ಪರಿಹಾರ ನೀಡುವುದಾಗಲೀ ಮಾಡಿಲ್ಲ ಎಂದುಆರೋಪಿಸಿದರು.
ಅಧಿಕಾರಿಗಳು ಕೂಡಲೇ ಈ ಗ್ರಾಮಗಳಿಗೆ ಭೇಟಿ ನೀಡಿ ಹಾನಿಗೊಳಗಾದ ಮನೆಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ನವ ಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷ ಗೋ.ರಮೇಶ್ ಗೌಡ, ಸಂತೋಷ್, ದೇವೇಂದ್ರಪ್ಪ, ನಾಗರಾಜ್, ನಯನಾ, ಶಿವಣ್ಣ, ರಾಜು ಗುಜ್ಜರ್, ಹೆಚ್.ಲೋಕೇಶ, ಪರಶುರಾಮಪ್ಪ, ಲಕ್ಷ್ಮಣ ಮೊದಲಾದವರು ಇದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422