ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜೂನ್ 2020
ಹಿಂದಿನ ತಹಶೀಲ್ದಾರ್ ಮತ್ತು ಉಪ ವಿಭಾಗಾಧಿಕಾರಿ ಅವರು ಕಾನೂನು ಬಾಹಿರವಾಗಿ ತಮ್ಮ ಜಮೀನನ್ನು ಪರಭಾರೆ ಮಾಡಿದ್ದಾರೆ ಎಂದು ಆರೋಪಿಸಿ ಹುಣಸೋಡು ಗ್ರಾಮದ ಕುಟುಂಬವೊಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಹನುಮಂತಪ್ಪ, ಹಾಲಮ್ಮ ಎಂಬುವವರ ಕುಟುಂಬದವರು ಪ್ರತಿಭಟನೆ ನಡೆಸಿದರು. ಕರ್ನಾಟಕ ಪರಿಶಿಷ್ಟ ಜಾತಿ, ಪಂಗಡ ಜಮೀನು ಪರಭಾರೆ ನಿಷೇಧ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ತಮ್ಮ ಕುಟುಂಬಕ್ಕೆ ಸೇರಬೇಕಾದ ಜಮೀನನ್ನು ಊರಿಗೆ ಸಂಬಂಧಿಸದ ವ್ಯಕ್ತಿಯೊಬ್ಬರಿಗೆ ಪರಭಾರೆ ಮಾಡಲಾಗಿದೆ. ಇದು ಕಾನೂನು ಬಾಹಿರವಾಗಿದೆ ಆಕ್ರೋಶ ವ್ಯಕ್ತಪಡಿಸಿದರು.
ಪಿಡಿಒ ಸೇರಿದಂತೆ ಹಲವು ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಜಮೀನು ತಮಗೆ ಸೇರಿದ್ದು ಎಂದು ತಿಳಿದು ಬಂದಿದೆ. ಆದರೆ ಹಿಂದಿನ ತಹಶೀಲ್ದಾರ್ ಮತ್ತು ಉಪ ವಿಭಾಗಾಧಿಕಾರಿಗಳು ತಮ್ಮ ಪಿಡಿಒ ನೀಡಿದ ವರದಿಯನ್ನು ಪರಿಗಣಿಸದೆ, ಜಿಲ್ಲಾಧಿಕಾರಿ ನ್ಯಾಯಾಲಯದ ತೀರ್ಪು ಪ್ರಕರಟವಾಗುವ ಮೊದಲೇ ಪರಭಾರ ಮಾಡಲಾಗಿದೆ ಎಂದು ಆರೋಪಿಸಿದರು.
ಸತೀಶ್, ಗಜೇಂದ್ರ, ನಾಗರಾಜ್, ಶಿವರಾಜ್, ಸುರೇಶ್, ಹನುಮಂತ, ರಾಜೇಂದ್ರಪ್ರಸಾದ್, ಪ್ರಶಾಂತ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422