SHIVAMOGGA LIVE NEWS | 30 NOVEMBER 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ವೇಳೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ದಿಢೀರ್ ಅಸ್ವಸ್ಥರಾಗಿದ್ದಾರೆ (Ill). ತಕ್ಷಣ ನೆರವಿಗೆ ಧಾವಿಸಿದ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಟರಾಜ್ ಆರೈಕೆ ಮಾಡಿದರು.
ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ಆಯೋಜಿಸಲಾಗಿತ್ತು. ಸಭೆ ಮಧ್ಯೆ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಅಸ್ವಸ್ಥರಾದರು. ವೇದಿಕೆ ಮೇಲಿದ್ದ ಸಚಿವ ಮಧು ಬಂಗಾರಪ್ಪ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೇರಿದಂತೆ ಅಧಿಕಾರಿಗಳು ಕಾವೇರಿ ಅವರ ನೆರವಿಗೆ ಧಾವಿಸಿದರು.

ವೇದಿಕೆ ಮುಂಭಾಗ ಕುಳಿತಿದ್ದ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಟರಾಜ್ ತಕ್ಷಣ ನೆರವಿಗೆ ಧಾವಿಸಿದರು. ಸಭಾಂಗಣದಿಂದ ಹೊರಗೆ ತೆರಳಲು ಎದ್ದು ನಿಂತ ಬಿ.ಬಿ.ಕಾವೇರಿ ಅವರಿಗೆ ಕೆಲವು ಕ್ಷಣ ಅಲ್ಲಿಯೇ ಕೂರುವಂತೆ ಸಲಹೆ ನೀಡಿದರು. ಸುಧಾರಿಸಕೊಂಡ ಕಾವೇರಿ ಅವರನ್ನು ಸಭಾಂಗಣದಿಂದ ಹೊರಗೆ ಕೊರೆದೊಯ್ಯಲಾಯಿತು.
ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಗೆ ಮಿನಿಸ್ಟರ್ ದಿಢೀರ್ ಭೇಟಿ, ಅಧಿಕಾರಿ ಸಸ್ಪೆಂಡ್
ಕೆಲವು ನಿಮಿಷದ ಬಳಿಕ ಜಿಲಾಧಿಕಾರಿ ಗುರುದತ್ತ ಹೆಗಡೆ ಸಭಾಂಗಣಕ್ಕೆ ಹಿಂತಿರುಗಿ, ಕಾವೇರಿ ಅವರ ಕ್ಷೇಮವಾಗಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಡಾ. ಧನಂಜಯ ಸರ್ಜಿ ಅವರ ಕರ್ತವ್ಯ ಪ್ರಜ್ಞೆಗೆ ಮೆಚ್ಚುಗೆ ವ್ಯಕ್ತವಾಯಿತು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





