ಎಣ್ಣೆ ಹೊಡೆಯೋರು, ಸಿಗರೇಟು ಸೇದೋರಿಗಾಗಿ ಶಿವಮೊಗ್ಗದಲ್ಲೊಂದು ಇಂದಿರಾ ಕ್ಯಾಂಟೀನ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಕಡಿಮೆ ದರದಲ್ಲಿ ಊಟ, ತಿಂಡಿ ಪೂರೈಸಬೇಕಿದ್ದ ಇಂದಿರಾ ಕ್ಯಾಂಟೀನ್‌ ಇಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌ ಆಗಿ ಪರಿವರ್ತನೆಯಾಗಿದೆ. ನಿರ್ಮಾಣವಾಗಿ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌ (Indira Canteen) ಕಟ್ಟಡ ಕುಡುಕರ ಪಾಲಿನ ಸ್ವರ್ಗವಾಗಿದ್ದು, ಅಕ್ರಮ ಚಟುವಟಿಕೆಯ ಅಡ್ಡೆಯಾಗಿದೆ.

ಇದನ್ನೂ ಓದಿ » ಜನರಿಂದ ತಪ್ಪಿಸಿಕೊಳ್ಳುವಾಗ ಗುಂಡಿಗೆ ಬಿದ್ದ ಕಳ್ಳ, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ ಗ್ರಾಮಸ್ಥರು

ಶಿವಮೊಗ್ಗದ ವಿದ್ಯಾನಗರ ಮುಖ್ಯ ರಸ್ತೆಯಲ್ಲಿ ಈಚೆಗೆ ಇಂದಿರಾ ಕ್ಯಾಂಟೀನ್‌ ನಿರ್ಮಿಸಲಾಗಿದೆ. ಈತನಕ ಕ್ಯಾಂಟೀನ್‌ ಉದ್ಘಾಟನೆಯಾಗಿಲ್ಲ. ಹಾಗಾಗಿ ಕಟ್ಟಡ ಅನಾಥವಾಗಿ ಉಳಿದುಕೊಂಡಿದೆ.

Shimoga Vidyanagara Indira Canteen

ಕುಡುಕರ ಅಡ್ಡೆಯಾದ ಇಂದಿರಾ ಕ್ಯಾಂಟೀನ್‌

ವಿದ್ಯಾನಗರದ ಇಂದಿರಾ ಕ್ಯಾಂಟೀನ್‌ ಕುಡುಕರ ಅಡ್ಡೆಯಾಗಿದೆ. ಮದ್ಯದ ಅಂಗಡಿಯಿಂದ ಮದ್ಯ ತಂದು ಇಂದಿರಾ ಕ್ಯಾಂಟೀನ್‌ ಕಟ್ಟಡದೊಳಗೆ ಕುಡಿಯುತ್ತಿದ್ದಾರೆ. ಬಿಯರ್‌ ಬಾಟಲಿಗಳು, ಮದ್ಯದ ಪೌಚ್‌ಗಳನ್ನು ಅಲ್ಲಿಯೇ ಬಿಸಾಡಿ ಹೋಗುತ್ತಿದ್ದಾರೆ. ಹಾಗಾಗಿ ಇಂದಿರಾ ಕ್ಯಾಂಟೀನ್‌ (Indira Canteen) ಒಳಾಂಗಣದಲ್ಲಿ ರಾಶಿ ರಾಶಿ ಮದ್ಯದ ಪೌಚುಗಳು ಬಿದ್ದಿವೆ.

Shimoga Vidyanagara Indira Canteen

ಹಗಲು, ರಾತ್ರಿ ಮದ್ಯ ಸೇವಿಸುತ್ತಾರೆ

ಇಂದಿರಾ ಕ್ಯಾಂಟೀನ್‌ 24 ಗಂಟೆಯ ಬಾರ್‌ ಆಗಿ ಪರಿವರ್ತನೆಯಾಗಿದೆ. ಹಗಲಲ್ಲು ಇಲ್ಲಿ ಕುಡುಕರ ಗುಂಪು ನೆರದಿರುತ್ತದೆ. ರಾತ್ರಿ ಹೊತ್ತಲು ಮದ್ಯ ಸೇವಿಸುತ್ತಿರುತ್ತಾರೆ. ಸಿಗರೇಟು ಹೊಗೆ ಇರುತ್ತೆ. ಗಾಂಜಾ ಸೇದುತ್ತಾರೆ ಅಂತಲು ಕೆಲವರು ಹೇಳುತ್ತಾರೆ ಎಂದು ಸ್ಥಳೀಯರೊಬ್ಬರು ದೂರುತ್ತಾರೆ. ಇಂದಿರಾ ಕ್ಯಾಂಟೀನ್‌ ಅಕ್ರಮದ ಅಡ್ಡಿಯಾಗಿದೆ  ಎಂದು ಅವರು ಬೇಸರ ವ್ಯಕ್ತಪಡಿಸುತ್ತಾರೆ.

Shimoga Vidyanagara Indira Canteen

ಇದನ್ನೂ ಓದಿ » ತಣ್ಣಗಾಯ್ತು ಶಿವಮೊಗ್ಗ ಈದ್ಗಾ ಮೈದಾನ ವಿವಾದ, ಪುನಃ ವಾಹನ ಪಾರ್ಕಿಂಗ್‌ಗೆ ಅವಕಾಶ, ಯಾವಾಗ?

ಸರ್ಕಾರದ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್‌ (Indira Canteen) ಯೋಜನೆ ಈ ರೀತಿ ದುರ್ಬಳಕೆ ಆಗುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಇನ್ನು, ಈ ಇಂದಿರಾ ಕ್ಯಾಂಟೀನ್‌ ಅನ್ನು ಶೀಘ್ರ ಉದ್ಘಾಟನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Shimoga Vidyanagara Indira Canteen

Shimoga Vidyanagara Indira Canteen

Shimoga Vidyanagara Indira Canteen

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 9, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment