ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 APRIL 2023
SHIMOGA : ಗೃಹಿಣಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಗಂಡ, ಅತ್ತೆ, ನಾದಿನಿಗೆ ಕಠಿಣ ಜೈಲು ಶಿಕ್ಷೆ (imprisonment), ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ ಇನ್ನು ಆರು ತಿಂಗಳು ಜೈಲು ಶಿಕ್ಷೆ ಮುಂದುವರೆಯಲಿದೆ ಆದೇಶಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಏನಿದು ಪ್ರಕರಣ?
ಶಿವಮೊಗ್ಗ ನಗರದ ಗೃಹಿಣಿಯೊಬ್ಬರು 2020ರ ಮೇ 18ರಂದು ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಸಂಬಂಧ ಗೃಹಿಣಿಯ ತಾಯಿ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಗಂಡನ ಮನೆಯಲ್ಲಿ ವರದಕ್ಷಿಣೆ ತರುವಂತೆ, ಬೈಕ್ ಕೊಡಿಸುವಂತೆ ಕಿರುಕುಳ ನೀಡುತ್ತಿದ್ದರು. ಸಣ್ಣಪುಟ್ಟ ವಿಚಾರಕ್ಕೂ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಿ ದೂರು ನೀಡಿದ್ದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್ಪೋಸ್ಟ್ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್
ಗೃಹಿಣಿಯ ಪತಿ ಶಿವರಾಜ್ ಅಲಿಯಾಸ್ ಮಧು, ಅತ್ತೆ ಶಾಂತಾ, ನಾದಿನಿ ದೀಪಾ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಡಿವೈಎಸ್ಪಿ ಉಮೇಶ್ ಈಶ್ವರ್ ನಾಯಕ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ತೀರ್ಪು ಪ್ರಕಟಿಸಿದ ಕೋರ್ಟ್
ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್.ಮಾನು ಅವರು ವಿಚಾರಣೆ ನಡೆಸಿದರು. ಆರೋಪ ಸಾಬೀತಾದ ಹಿನ್ನೆಲೆ ಮೂವರು ಆರೋಪಿಗಳಿಗೆ 7 ವರ್ಷ ಕಠಿಣ ಕಾರಾಗೃಹ (imprisonment) ಶಿಕ್ಷೆ, ತಲಾ 16 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಸಾದಾ ಕಾರಗೃಹ ಶಿಕ್ಷೆ ವಿಧಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾಗಿ ಶಾಂತರಾಜ್ ಅವರು ವಾದ ಮಂಡಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಫ್ಲೈ ಓವರ್ ಕೆಳಗೆ ಬೈಕ್ ನಿಲ್ಲಿಸುವವರೆ ಹುಷಾರ್