ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಸದ್ಯದಲ್ಲೇ IMPS ಮತ್ತು ಯುಪಿಐ ಸೇವೆಗಳನ್ನು ಪ್ರಾರಂಭಿಸುತ್ತಿದೆ. ಇನ್ಮುಂದೆ ಗೂಗಲ್ ಪೇ, ಫೋನ್ ಪೇ, ಪೇಟಿಎಂಗಳಲ್ಲಿಯು ಡಿಸಿಸಿ ಬ್ಯಾಂಕ್ ಖಾತೆಯಿಂದ ಹಣ ಪಾವತಿಸುವ ಸೌಲಭ್ಯ ದೊರೆಯಲಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಡಿಸಿಸಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಈಗಾಗಲೇ ಡಿಸಿಸಿ ಬ್ಯಾಂಕ್‌ನ ಮೊಬೈಲ್ ಆಪ್ ಮೂಲಕ ಗ್ರಾಹಕರು ತಮ್ಮ ಖಾತೆಯನ್ನು ನಿಭಾಯಿಸುತ್ತಿದ್ದಾರೆ. ನೆಫ್ಟ್, ಆರ್‌ಟಿಜಿಎಸ್ ವ್ಯವಹಾರ ಮಾಡುತ್ತಿದ್ದಾರೆ. ಸದ್ಯದಲ್ಲೇ IMPS ಮತ್ತು ಯುಪಿಐ ಸೇವೆ ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು.
ಯುಪಿಐ ಸೇವೆಗಳ ಇನ್ನೊಂದು ತಿಂಗಳಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಈಗಾಗಲೇ ಇದರ ಪರಿಕ್ಷಾರ್ಥ ಪ್ರಯೋಗಗಳು ನಡೆಯುತ್ತಿವೆ.
– ಆರ್.ಎಂ.ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ
ಮತ್ತೊಂದು ಮೊಬೈಲ್ ಎಟಿಎಂ

ರೈತರ ಮನೆ ಬಾಗಿಲಿಗೆ ಬ್ಯಾಂಕಿಂಗ್ ವ್ಯವಸ್ಥೆ ಕಲ್ಪಿಸಲು ಮೊಬೈಲ್ ಎಟಿಎಂ ವಾಹನದ ಸೌಲಭ್ಯ ಕಲ್ಪಿಸಲಾಗಿದೆ. ಈಗಾಗಲೇ ಒಂದು ಮೊಬೈಲ್ ಎಟಿಎಂ ವಾಹನ ಸಂಚರಿಸುತ್ತಿದೆ. ಸದ್ಯದಲ್ಲೇ ಮತ್ತೊಂದು ಮೊಬೈಲ್ ಎಟಿಎಂ ವಾಹನಕ್ಕೆ ಚಾಲನೆ ನೀಡಲಾಗುತ್ತದೆ. ಇದರಿಂದ ಬ್ಯಾಂಕಿಂಗ್ ವ್ಯವಸ್ಥೆ ಮತ್ತಷ್ಟು ಜನರಿಗೆ ತಲುಪಲಿದೆ ಎಂದು ತಿಳಿಸಿದರು.
ಶೆಟ್ಟಿಹಳ್ಳಿ, ಚಿತ್ರಶೆಟ್ಟಿಹಳ್ಳಿ, ಪುರದಾಳು ಗ್ರಾಮಗಳ ವ್ಯಾಪ್ತಿಯಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ವಿಸ್ತರಿಸಲು ಮೊಬೈಲ್ ಎಟಿಎಂ ವಾಹನಕ್ಕೆ ಚಾಲನೆ ನೀಡಲಾಗುತ್ತದೆ. ವಾರದಲ್ಲಿ ಒಂದು ದಿನ ಅಥವಾ ಎರಡು ದಿನ ಈ ಭಾಗಕ್ಕೆ ಮೊಬೈಲ್ ಎಟಿಎಂ ವಾಹನ ಹೋಗಲಿದೆ. ಇದರಿಂದ ಆ ಭಾಗದ ರೈತರು ಎಟಿಎಂ ಕಾರ್ಡ್ ಬಳಸಿ ತಮ್ಮ ಬ್ಯಾಂಕಿಂಗ್ ವ್ಯವಹಾರ ನಡೆಸಬಹುದು.
– ಆರ್.ಎಂ.ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ
ಸುದ್ದಿಗೋಷ್ಠಿಯಲ್ಲಿ ಬ್ಯಾಂಕಿನ ಸಿಇಒ ರಾಜಣ್ಣ ರೆಡ್ಡಿ.ಸಿ, ಬ್ಯಾಂಕಿನ ನಿರ್ದೇಶಕರಾದ ಬಸವರಾಜ್.ಡಿ.ಎಲ್, ಚಂದ್ರಶೇಖರ.ಎಸ್.ಪಿ, ರುದ್ರೇಗೌಡ.ಕೆ.ಪಿ, ಪರಮೇಶ.ಎಂ.ಎಂ, ಮರಿಯಪ್ಪ.ಎಸ್.ಕೆ, ಸುಧೀರ್.ಜಿ.ಎನ್, ಮಹಲಿಂಗಯ್ಯ ಶಾಸ್ತ್ರಿ.ಎಸ್.ಎನ್, ರವೀಂದ್ರ.ಹೆಚ್.ಎಸ್, ದುಗ್ಗಪ್ಪಗೌಡ.ಕೆ.ಪಿ ಇದ್ದರು.
ಇದನ್ನೂ ಓದಿ » ಮದುವೆ ಆಮಂತ್ರಣ ಪತ್ರಿಕೆ ಕೊಡಲು ಹೋಗುತ್ತಿದ್ದಾಗ ಅಪಘಾತ, ಯುವತಿ ಸಾವು, ಹೇಗಾಯ್ತು ಘಟನೆ?

IMPS and UPI Facility In Shimoga DCC Bank
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





