SHIVAMOGGA LIVE NEWS | WATER SUPPLY | 21 ಏಪ್ರಿಲ್ 2022
ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಮೇಯರ್ ಸುನೀತಾ ಅಣ್ಣಪ್ಪ ಅವರು ನೀರು ಸರಬರಾಜು ಘಟಕಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಸರಿಯಾಗಿ ನೀರು ಬರುತ್ತಿಲ್ಲ
ಶಿವಮೊಗ್ಗ ನಗರದ ಹಲವು ಬಡಾವಣೆಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ ಎಂಬ ದೂರು ಸಾಮಾನ್ಯವಾಗಿದೆ. ಟ್ಯಾಂಕರ್’ಗಳ ಮೂಲಕ ಮನೆಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ನೀರು ಬಾರದ ಹಿನ್ನೆಲೆ ಬೆಳಗ್ಗೆಯಿಂದ ಹಲವು ಕಾರ್ಪೊರೇಟರ್’ಗಳು, ಅಧಿಕಾರಿಗಳಿಗೆ ಸಾರ್ವಜನಿಕರು ಕರೆ ಮಾಡುತ್ತಿದ್ದಾರೆ.
ಘಟಕಕ್ಕೆ ಮೇಯರ್ ಭೇಟಿ
ಇನ್ನು, ನಗರದ ಶ್ರೀ ಕೃಷ್ಣರಾಜೇಂದ್ರ ನೀರು ಸರಬರಾಜು ಘಟಕಕ್ಕೆ ಮೇಯರ್ ಸುನಿತಾ ಅಣ್ಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಿರುವ ಹಿನ್ನೆಲೆಯಲ್ಲಿ ಮಂಡ್ಲಿಯಲ್ಲಿರುವ ಸರಬರಾಜು ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಒಂದು ವಾರದಿಂದ 3 ಟ್ರಾನ್ಸ್ ಫಾರ್ಮರ್’ಗಳು ಸುಟ್ಟು ಹೋಗಿದೆ. ನಗರದಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಅಧಿಕಾರಿಗಳೊಂದಿಗೆ ಸಮಸ್ಯೆ ಕುರಿತು ಮಾತನಾಡಿದ ಅವರು, ತಕ್ಷಣವೇ ಹೊಸ ಟಿ.ಸಿಗಳನ್ನು ಅಳವಡಿಸುವಂತೆ ಸೂಚನೆ ನೀಡಿದರು. ಮೇಯರ್ ಸೂಚನೆ ಮೇರೆಗೆ ಟಿ.ಸಿ.ಗಳ ಅಳವಡಿಕೆಯ ಕಾರ್ಯ ಸಹ ಆರಂಭ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಜಗದೀಶ್, ಪಾಲಿಕೆ ಸದಸ್ಯರಾದ ರಾಹುಲ್ ಪಿ. ಬಿದರೆ, ಪ್ರಭಾಕರ್ ಹಾಗೂ ಅಧಿಕಾರಿಗಳು ಇದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200