ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 19 JUNE 2023
SHIMOGA : ಜಿಲ್ಲಾ ಉಸ್ತುವಾರಿ (Incharge Minister) ಸಚಿವ ಮಧು ಬಂಗಾರಪ್ಪ ಅವರ ಕಚೇರಿಯನ್ನು ಶಿವಮೊಗ್ಗದಲ್ಲಿ ಉದ್ಘಾಟಿಸಲಾಯಿತು. ಇದಕ್ಕೂ ಮೊದಲು ಕಚೇರಿಯಲ್ಲಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಟೇಪ್ ಕತ್ತರಿಸಿ ಕಚೇರಿಯ (Incharge Minister) ಉದ್ಘಾಟನೆ ಮಾಡಿದರು. ಈ ವೇಳೆ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಜೊತೆಗಿದ್ದರು.
ಎಲ್ಲಿದೆ ಉಸ್ತುವಾರಿ ಸಚಿವರ ಕಚೇರಿ?
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿರುವ ಕಟ್ಟಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಸ್ಥಾಪಿಸಲಾಗಿದೆ. ಈ ಮೊದಲು ಈ ಕೊಠಡಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಿಗೆ ಮೀಸಲಾಗಿತ್ತು. ಈ ಕಚೇರಿಯಲ್ಲಿ ಸಚಿವರ ಕೊಠಡಿ, ಆಪ್ತ ಸಮಾಲೋಚನಾ ಕೊಠಡಿ, ಸಿಬ್ಬಂದಿ ಕೊಠಡಿ, ಸಾರ್ವಜನಿಕರು ಕೂರಲು ವ್ಯವಸ್ಥೆ ಮಾಡಲಾಗಿದೆ.
ಹೇಗಿತ್ತು ಉದ್ಘಾಟನಾ ಸಮಾರಂಭ?
ಸಚಿವ ಮಧು ಬಂಗಾರಪ್ಪ ಅವರು ಟೇಪ್ ಕತ್ತರಿಸುವ ಮೂಲಕ ಕಚೇರಿ ಉದ್ಘಾಟಿಸಿದರು. ಇದಕ್ಕೂ ಮೊದಲು ಅವರ ಅಭಿಮಾನಿಗಳು ಕಚೇರಿಯಲ್ಲಿ ಪೂಜೆ ಸಲ್ಲಿಸಿದ್ದರು. ಸಚಿವ ಮಧು ಬಂಗಾರಪ್ಪ ಅವರು ದೇವರಿಗೆ ಪೂಜೆ ಸಲ್ಲಿಸಿದರು. ಮಾಜಿ ಸಿಎಂ ಬಂಗಾರಪ್ಪ ದಂಪತಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಜೆಡಿಎಸ್ ಎಂಎಲ್ಎ ಭೇಟಿ
ಉಸ್ತುವಾರಿ ಸಚಿವರ ಕಚೇರಿಗೆ ಉದ್ಘಾಟನೆ ಸಮಾರಂಭದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕಿ ಶಾರದಾ ಪೂರ್ಯಾನಾಯ್ಕ್ ಭಾಗಿಯಾದರು. ಕಚೇರಿಗೆ ಆಗಮಿಸಿ ಸಚಿವ ಮಧು ಬಂಗಾರಪ್ಪಗೆ ಹೂಗುಚ್ಛ ನೀಡಿದರು. ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರ ಭೇಟಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕುತೂಹಲ ಮೂಡಿಸಿತು.
ನೂಕುನುಗ್ಗಲು, ಫೋಟೊಗೆ ತಳ್ಳಾಟ
ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ದೊಡ್ಡ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು. ಎಲ್ಲರು ಮಧು ಬಂಗಾರಪ್ಪ ಅವರಿಗೆ ಸಿಹಿ ತಿನ್ನಿಸಿ, ಫೋಟೊ ಕ್ಲಿಕ್ಕಿಸಕೊಳ್ಳಲು ಮುಗಿಬಿದ್ದರು. ಇದರಿಂದ ಸಚಿವ ಕೊಠಡಿಯಲ್ಲಿ ನೂಕುನುಗ್ಗಲು ಉಂಟಾಯಿತು.
ಇದನ್ನೂ ಓದಿ – IMPACT | ಶಿವಮೊಗ್ಗ ಲೈವ್ ವರದಿ ಇಂಪ್ಯಾಕ್ಟ್, ಶಿವಮೊಗ್ಗ – ಸಾಗರ ಹೆದ್ದಾರಿಯಲ್ಲಿ ತಪ್ಪಿತು ಮತ್ತಷ್ಟು ಅಪಘಾತ
ಕಾಂಗ್ರೆಸ್ ಪಕ್ಷದ ಜಿಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಸೇರಿದಂತೆ ಹಲವರು ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422