ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 JULY 2024
SHIMOGA : ಗಾಂಧಿ ಬಜಾರ್ನಲ್ಲಿರುವ (Gandhi Bazaar) ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಏಳೆಂಟು ಅಂಗಡಿಗಳಿಗೆ ಬೆಂಕಿ ಹೊತ್ತುಕೊಂಡಿದೆ ಎನ್ನಲಾಗಿದ್ದು, ಒಳಗಿದ್ದ ವಸ್ತುಗಳು ಆಹುತಿಯಾಗಿವೆ. ಇನ್ನು, ದಟ್ಟ ಹೊಗೆ ಆವರಿಸಿದ್ದರು ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿಗೆ ತೀವ್ರ ಸಮಸ್ಯೆ ಉಂಟಾಗಿದೆ.
ಬಸವೇಶ್ವರ ದೇವಸ್ಥಾನದ ಹಿಂಭಾಗದ ಬಟ್ಟೆ ಮಾರುಕಟ್ಟೆಯ ಅಂಗಡಿಗಳಿಗೆ ಬೆಂಕಿ ಹೊತ್ತುಕೊಂಡಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಸ್ಥಳಕ್ಕೆ ಆಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಆದರೆ ಇಡೀ ಆವರಣದಲ್ಲಿ ದಟ್ಟ ಹೊಗೆ ಆವರಿಸಿದೆ. ಹಾಗಾಗಿ ಎಲ್ಲೆಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬುದು ಗೊತ್ತಾಗದಂತಾಗಿದೆ. ಇದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ಬಟ್ಟೆ ಮಾರುಕಟ್ಟೆ ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಇನ್ನು, ವಿಷಯ ತಿಳಿದು ದೊಡ್ಡ ಸಂಖ್ಯೆಯ ಜನರು ಗಾಂಧಿ ಬಜಾರ್ ಬಟ್ಟೆ ಮಾರುಕಟ್ಟೆ ಬಳಿ ಸೇರಿದ್ದಾರೆ. ಜನರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ – ಹೊಸನಗರದಲ್ಲಿ ಕಂದಕಕ್ಕೆ ಉರುಳಿದ KSRTC ಬಸ್, ಮರದಿಂದಾಗಿ ತಪ್ಪಿತು ದೊಡ್ಡ ಅನಾಹುತ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





