ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 15 AUGUST 2023
SHIMOGA : ಸೋಗಾನೆ ವಿಮಾನ ನಿಲ್ದಾಣದಲ್ಲಿ ಇದೆ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆ (Independence Day) ಅಂಗವಾಗಿ ಇವತ್ತು ಬೆಳಗ್ಗೆ ವಿಮಾನ ನಿಲ್ದಾಣದ ಟರ್ಮಿನಲ್ ಮುಂಭಾಗ ತ್ರಿವರ್ಣ ಧ್ವಜ ಹಾರಿಸಲಾಯಿತು. ಎನ್ಸಿಸಿ ಕೆಡೆಟ್ಗಳು, ರಾಜ್ಯ ಕೈಗಾರಿಕ ಭದ್ರತಾ ಪಡೆ ಸಿಬ್ಬಂದಿ ಪಾಲ್ಗೊಂಡಿದ್ದರು. 20 ಕರ್ನಾಟಕ ಬೆಟಾಲಿಯನ್ ಎನ್ಸಿಸಿ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಆಟೋ ಚಾಲಕರಿಂದ ಅದ್ಧೂರಿ ಆಚರಣೆ
SHIMOGA : ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಮುಂಭಾಗ ಆಟೋ ಚಾಲಕರು ವಿಭಿನ್ನವಾಗಿ ಸ್ವಾತಂತ್ರ್ಯೋತ್ಸವ (Independence Day) ಆಚರಿಸಿದರು. ಆಟೋಗೆ ಬೃಹತ್ ರಾಷ್ಟ್ರಧ್ವಜ ಕಟ್ಟಿ, ರಾಷ್ಟ್ರಭಕ್ತಿ ಗೀತೆಗಳನ್ನು ಹಾಕಿ ಸಿಹಿ ಹಂಚಿ, ಸ್ವಾತಂತ್ರ್ಯ ದಿನಾಚರಣೆ ಮಾಡಿದರು. ಸಂಚಾರ ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಕುಮಾರ್ ಸೇರಿದಂತೆ ಸಿಬ್ಬಂದಿಗಳಿಗೆ ಸಿಹಿ ಹಂಚಿ ಆಟೋ ಚಾಲಕರು ಖುಷಿ ಪಟ್ಟರು.
ಪೊಲೀಸ್ ಕಚೇರಿಯಲ್ಲಿ ಧ್ವಜಾರೋಹಣ
SHIMOGA : ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಧ್ವಜಾರೋಹಣ ಮಾಡಿದರು. ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ, ಪ್ರೊಬೇಷನರಿ ಐಪಿಎಸ್ ಅಧಿಕಾರಿ ಆರ್.ಬಿಂದುಮಣಿ, ಡಿವೈಎಸ್ಪಿಗಳಾದ ಬಾಲರಾಜ್, ಪ್ರಭು ಡಿ.ಟಿ, ಸುರೇಶ್.ಎಂ ಸೇರಿದಂತೆ ಹಲವು ಸಿಬ್ಬಂದಿ ಇದ್ದರು. ಇದೆ ವೇಳೆ ರಂಗೋಲಿ ಹಬ್ಬ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ನೀಡಲಾಯಿತು.
ವಾರಸುದಾರರಿಗೆ ಮೊಬೈಲ್ ಹಸ್ತಾಂತರ
SHIMOGA : ಕಳ್ಳತನವಾಗಿದ್ದ ಮೊಬೈಲ್ ಫೋನ್ಗಳನ್ನು ಶಿವಮೊಗ್ಗ ಸಿಇಎನ್ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಅವುಗಳನ್ನು ವಾರಸುದಾರರಿಗೆ ಹಸ್ತಾಂತರ ಮಾಡಲಾಯಿತು. 33 ಮೊಬೈಲ್ ಫೋನ್ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ನೇತೃತ್ವದಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಕುವೆಂಪು ವಿವಿಯಲ್ಲಿ ಧ್ವಜಾರೋಹಣ
SHANKARAGHATTA : ಕುವೆಂಪು ವಿಶ್ವವಿದ್ಯಾಲಯದ ಜ್ಞಾನಸಹ್ಯಾದ್ರಿ ಆವರಣದಲ್ಲಿ ಇಂದು ಬೆಳಿಗ್ಗೆ 77ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಕೆ. ನವೀನ್ ಕುಮಾರ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಹಣಕಾಸು ಅಧಿಕಾರಿ ಪ್ರೊ. ಎಸ್.ಕೆ. ನರಸಿಂಹ ಮೂರ್ತಿ, ಡಾ. ಎನ್. ಡಿ. ವಿರೂಪಾಕ್ಷ, ಡಾ.ಗಜಾನನ ಪ್ರಭು, ಡಾ. ರವೀಂದ್ರ ಗೌಡ, ವಿವಿಧ ವಿಭಾಗಗಳ ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ವಾತಂತ್ರ್ಯ ಸಂಭ್ರಮದ ವೇಳೆ ಜಾಗೃತಿ
SHIMOGA : ರೋಡ್ ಥ್ರಿಲ್ಸ್, ಸಮನ್ವಯ ಸಂಸ್ಥೆಯ ಸಹಯೋಗದಲ್ಲಿ ವಿಭಿನ್ನವಾಗಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಯಿತು. ವಡ್ಡಿನಕೊಪ್ಪ ಸರ್ಕಾರಿ ಶಾಲೆಯಲ್ಲಿ ಧ್ವಜಾರೋಹಣ ನೆರವೇರಿಸಿ, ನಗರದಾದ್ಯಂತ ಬೈಕ್ ಜಾಥಾ ನಡೆಸಲಾಯಿತು. ಸಂಚಾರ ನಿಯಮಗಳ ಪಾಲನೆ, ಕಡ್ಡಾಯ ಹೆಲ್ಮೆಟ್ ಧಾರಣೆ ಕುರಿತು ಪ್ರಮುಖ ಸರ್ಕಲ್ಗಳಲ್ಲಿ ಜಾಗೃತಿ ಮೂಡಿಸಲಾಯಿತು. ಡಿಎಆರ್ ಮೈದಾನದಲ್ಲಿ ಸಚಿವ ಮಧು ಬಂಗಾರಪ್ಪ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಜಾಥಾಗೆ ಚಾಲನೆ ನೀಡಿದರು. ಸಂಸ್ಥೆಯ ಅಭಿಷೇಕ್ ರಾವ್, ಎನ್.ಅಭಿಷೇಕ್, ಸಚಿನ್ ಶೆಟ್ಟಿ, ಆಕಾಶ್ ನಾರಾಯಣ್ ಸೇರಿದಂತೆ ಹಲವರು ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.
ಪೊಲೀಸರು, ಸಾರ್ವಜನಿಕರಿಂದ ರಕ್ತದಾನ ಶಿಬಿರ
HOSANAGARA : ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹೊಸನಗರ ಠಾಣೆ ಪೊಲೀಸರು ಮತ್ತು ಸಾರ್ವಜನಿಕರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡರು. 79 ಮಂದಿ ರಕ್ತದಾನ ಮಾಡಿದರು. ಹೊಸನಗರ ಪೊಲೀಸ್ ಠಾಣೆ ನೇತೃತ್ವದಲ್ಲಿ ಪೊಲೀಸ್ ಇಲಾಖೆ, ಜೆಸಿಐ ಘಟಕ, ಮೆಗ್ಗಾನ್ ಆಸ್ಪತ್ರೆ ರಕ್ತನಿಧಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಸೈನಿಕ್ ಪಾರ್ಕ್ನಲ್ಲಿ ಧ್ವಜಾರೋಹಣ
SHIMOGA : ನಗರದ ಸೈನಿಕ ಪಾರ್ಕ್ನಲ್ಲಿ ಜಿಲ್ಲಾ ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಧ್ವಜಾರೋಹಣ ಮಾಡಲಾಯಿತು. ನಿವೃತ್ತ ಕರ್ನಲ್ ರಘುನಾಥ್, ಕರ್ನಲ್ ಆನಂದರಾವ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ ಡಾ. ಸಿ.ಎ ಹಿರೇಮಠ ಮಾತನಾಡಿದರು. ಶಿವಮೊಗ್ಗ ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಪಿ.ವಿ ಕೃಷ್ಣರೆಡ್ಡಿ, ಕಾರ್ಯದರ್ಶಿ ಉಮೇಶ್ ಬಾಪಟ್, ಪದಾಧಿಕಾರಿಗಳಾದ ರಘುನಾಥ್, ಎಸ್, ಕೆ.ಎಸ್, ಉದಯ, ವಿ. ಎನ್ ಮೂರ್ತಿ, ಅನಿಲ್ ಪಿ.ಜಿ, ಶ್ರೀನಾಥ್ ಜಿ.ಆರ್, ಉಮೇಶ ಜಿ, ರಾಜೇಶ್ ಭಟ್, ಜಗದೀಶ್ ಭಟ್, ಸಮೀವುಲ್ಲಾ, ಭಾನುಪ್ರಕಾಶ್, ದಿನೇಶ್, ಮಹೇಶ್ ಡಿ.ಕೆ ಹಾಗೂ ಸಂಘದ ಎಲ್ಲಾ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಬಿತರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದ ಮಿನಿಸ್ಟರ್, ಇಲ್ಲಿದೆ 6 ಪ್ರಮುಖ ಪಾಯಿಂಟ್
ಹರಿಗೆಯಲ್ಲಿ ಅದ್ಭುತ ಮಹಿಳೆ ಕಾರ್ಯಕ್ರಮಕ್ಕೆ ಚಾಲನೆ
SHIMOGA : ಹರಿಗೆ ಶ್ರೀ ಕಾಲಭೈರವೇಶ್ವರ ವೃದ್ಧಾಶ್ರಮದ ಆವರಣದಲ್ಲಿ ಮಹಿಳೆಯರಿಂದ ಧ್ವಜಾರೋಹಣ ನೆರವೇರಿಸಲಾಯಿತು. ಉತ್ತರ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಅದ್ಭುತ ಮಹಿಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮಹಿಳೆಯ ಸಬಲೀಕರಣಕ್ಕಾಗಿ ಕಾರ್ಯಕ್ರಮ ರೂಪಿಸಲಾಗಿದೆ. ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಲೋಕೇಶ್ ನೇತೃತ್ವ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಪದಾಧಿಕಾರಿಗಳಾದ ಎಸ್.ಕುಮಾರೇಶ್, ಎಂ.ರಾಹುಲ್, ರಾಕೇಶ್, ಪವನ್, ಮೋಹನ್, ಸಂತೋಷ್ ಇನ್ಶಾಲ್ , ನರಸಿಂಹ, ಗೌತಮ್ ಹಾಗೂ ಯುವ ಕಾಂಗ್ರೆಸ್ನ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಪಥ ಸಂಚಲನಕ್ಕೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವ, ಇದೇ ಮೊದಲು ಕನ್ನಡದಲ್ಲಿ ಆದೇಶ
ರೈಲ್ವೆ ನಿಲ್ದಾಣದ ಬಳಿ ಆಟೋಗೆ ವಿಭಿನ್ನ ಅಲಂಕಾರ
SHIMOGA : ರೈಲ್ವೆ ಸ್ಟೇಷನ್ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಮಾಡಲಾಯಿತು. ಆಟೋಗೆ ವಿಭಿನ್ನವಾಗಿ ಅಲಂಕಾರ ಮಾಡಿ ಆಚರಣೆ ಮಾಡಲಾಯಿತು. ಪ್ರಮುಖರಾದ ಸಂತೋಷ ಎ.ಎನ್, ನಸೀರ್ ಅಹಮ್ಮದ್, ಮುಸ್ತು, ಜಾಬೀರ್, ಶಬೀರ್, ಅತ್ತು, ನಾಗರಾಜ, ದೀಪು ಇದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422