ಶಿವಮೊಗ್ಗ | ಸ್ವಾತಂತ್ರ್ಯೋತ್ಸವದ (INDEPENDENCE) ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ (FREEDOM FIGHTER) ಭಾವಚಿತ್ರಗಳ ಪ್ರದರ್ಶನ ಶಿವಮೊಗ್ಗದಲ್ಲಿ ವಿವಾದಕ್ಕೆ ಕಾರಣವಾಗಿದೆ. ಪರ, ವಿರೋಧ ಪ್ರತಿಭಟನೆ ಹುಟ್ಟುಹಾಕಿದೆ.
ಶಿವಮೊಗ್ಗದ ಬ್ಯಾರಿಸ್ ಸಿಟಿ ಸೆಂಟರ್ ಮಾಲ್’ನಲ್ಲಿ ಇವತ್ತು ಮಹಾನಗರ ಪಾಲಿಕೆ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಅಳವಡಿಸಲಾಗಿತ್ತು. ಇದು ಈಗ ವಿವಾದಕ್ಕೆ ಕಾರಣವಾಗಿದೆ.
ವಿವಾದದ ಕಿಡಿ ಹೊತ್ತಿದ್ದು ಹೇಗೆ?
ಸಿಟಿ ಸೆಂಟರ್ ಮಾಲ್’ನ ಒಳ ಆವರಣದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಪ್ರದರ್ಶನ ಆಯೋಜಿಸಲಾಗಿತ್ತು. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ, ಆಜಾದ್ ಚಂದ್ರಶೇಖರ್, ಸರ್ದಾರ್ ವಲ್ಲಭಬಾಯಿ ಪಟೇಲ್, ವಿನಾಯಕ ದಾಮೋದರ ಸಾರ್ವರ್ಕರ್, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಸೇರಿದಂತೆ ಹಲವರ ಭಾವಚಿತ್ರಗಳನ್ನು ಅಳವಡಿಸಲಾಗಿತ್ತು.
ಬ್ಯಾರಿಸ್ ಸಿಟಿ ಸೆಂಟರ್ ಮಾಲ್’ಗೆ ಬಂದಿದ್ದ ಕಾರ್ಪೊರೇಟರ್ ಒಬ್ಬರ ಪತಿ ಮತ್ತು ಸಾಮಾಜಿಕ ಹೋರಾಟಗಾರ ಆಸೀಫ್ ಮತ್ತು ಅವರ ಸಂಗಡಿಗರು, ಆಕ್ಷೇಪ ವ್ಯಕ್ತಪಡಿಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಆಸೀಫ್ ಆಕ್ಷೇಪಕ್ಕೆ ಕಾರಣವೇನು?
ಪ್ರದರ್ಶನದಲ್ಲಿ ಇರುವ ಭಾವಚಿತ್ರಗಳ ಪೈಕಿ ಮುಸ್ಲಿಂ ಹೋರಾಟಗಾರರನ್ನು ಕಡೆಗಣಿಸಲಾಗಿದೆ ಎಂದು ಆಸಿಫ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ವಿ.ಡಿ.ಸಾರ್ವರ್ಕರ್ ಅವರ ಭಾವಚಿತ್ರ ಅಳವಡಿಸಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭ ಸಿಟಿ ಸೆಂಟರ್ ಮಾಲ್ ಅವರಣದಲ್ಲಿ ಕೆಲ ಕಾಲ ಗೊಂದಲ ಉಂಟಾಯಿತು.
ಆಸಿಫ್ ಮತ್ತು ಅವರ ಸಂಗಡಿಗರು ಸಿಟಿ ಸೆಂಟರ್ ಮಾಲ್’ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ ವಿಡಿಯೋ ವೈರಲ್ ಆಗಿದೆ. ವಾಟ್ಸಪ್ ಮತ್ತು ಫೇಸ್’ಬುಕ್’ನಲ್ಲಿ ಹರಿದಾಡುತ್ತಿದೆ. ಅಲ್ಲದೆ ಪರ ವಿರೋಧದ ಚರ್ಚೆಗೂ ಕಾರಣವಾಯಿತು. ಇದರ ಬೆನ್ನಿಗೆ ಸಂಘ ಪರಿವಾರ ಮತ್ತು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಆಸೀಫ್ ಮತ್ತು ಆತನ ಸಂಗಡಿಗರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ನಡೆಸಿದ ಬಿಜೆಪಿ, ಸಂಘ ಪರಿವಾರ
ಇನ್ನು, ಬಿಜೆಪಿ ಮತ್ತು ಸಂಘ ಪರಿವಾರದ ಮುಖಂಡರು, ಕಾರ್ಯಕರ್ತರು ಸಿಟಿ ಸೆಂಟರ್ ಮಾಲ್ ಮುಂದೆ ಧರಣಿ ನಡೆಸಿದರು. ಆಸೀಫ್ ಮತ್ತು ಆತನ ಸಂಗಡಿಗರನ್ನು ಬಂಧಿಸಬೇಕು ಆಗ್ರಹಿಸಿದರು. ಅವರ ಬಂಧನ ಆಗುವವರೆಗೆ ತಾವು ಧರಣಿ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.
ಪಾಲಿಕೆಯಿಂದ ಪೊಲೀಸ್ ದೂರು
ಭಾವಚಿತ್ರ ಪ್ರದರ್ಶನದ ವೇಳೆ ಆಕ್ಷೇಪ ವ್ಯಕ್ತಪಡಿಸಿದ ಆರೋಪ ಸಂಬಂಧ ಆಸೀಫ್ ಮತ್ತು ಆತನ ಸಹಚರರ ವಿರುದ್ಧ ಪಾಲಿಕೆ ವತಿಯಿಂದ ದೂರು ನೀಡಲಾಗಿದೆ. ‘ಐಪಿಸಿ ಸೆಕ್ಷನ್ 341, 353 ಮತ್ತು 34ರ ಅಡಿಯಲ್ಲಿ ಆಸೀಫ್ ಮತ್ತು ಆತನ ಸಂಗಡಿಗರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ಬಿಜೆಪಿ ನಗರಾಧ್ಯಕ್ಷ ಜಗದೀಶ್ ಅವರು ತಿಳಿಸಿದ್ದಾರೆ.
ಬ್ಯಾರಿಸ್ ಸಿಟಿ ಸೆಂಟರ್ ಮಾಲ್’ನಲ್ಲಿ ನಡೆದ ಘಟನೆಯಿಂದ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹಾಗಾಗಿ ಸಿಟಿ ಸೆಂಟರ್ ಮಾಲ್’ನಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ, ಅವರ ಬಗ್ಗೆ ಗೊತ್ತಿರಬೇಕಾದ 8 ವಿಚಾರಗಳಿವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200