ಶಿವಮೊಗ್ಗ | ಸ್ವಾತಂತ್ರ್ಯೋತ್ಸವದ (INDEPENDENCE) ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ (FREEDOM FIGHTER) ಭಾವಚಿತ್ರಗಳ ಪ್ರದರ್ಶನ ಶಿವಮೊಗ್ಗದಲ್ಲಿ ವಿವಾದಕ್ಕೆ ಕಾರಣವಾಗಿದೆ. ಪರ, ವಿರೋಧ ಪ್ರತಿಭಟನೆ ಹುಟ್ಟುಹಾಕಿದೆ.
ಶಿವಮೊಗ್ಗದ ಬ್ಯಾರಿಸ್ ಸಿಟಿ ಸೆಂಟರ್ ಮಾಲ್’ನಲ್ಲಿ ಇವತ್ತು ಮಹಾನಗರ ಪಾಲಿಕೆ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಅಳವಡಿಸಲಾಗಿತ್ತು. ಇದು ಈಗ ವಿವಾದಕ್ಕೆ ಕಾರಣವಾಗಿದೆ.
ವಿವಾದದ ಕಿಡಿ ಹೊತ್ತಿದ್ದು ಹೇಗೆ?
ಸಿಟಿ ಸೆಂಟರ್ ಮಾಲ್’ನ ಒಳ ಆವರಣದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಪ್ರದರ್ಶನ ಆಯೋಜಿಸಲಾಗಿತ್ತು. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ, ಆಜಾದ್ ಚಂದ್ರಶೇಖರ್, ಸರ್ದಾರ್ ವಲ್ಲಭಬಾಯಿ ಪಟೇಲ್, ವಿನಾಯಕ ದಾಮೋದರ ಸಾರ್ವರ್ಕರ್, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಸೇರಿದಂತೆ ಹಲವರ ಭಾವಚಿತ್ರಗಳನ್ನು ಅಳವಡಿಸಲಾಗಿತ್ತು.
ಬ್ಯಾರಿಸ್ ಸಿಟಿ ಸೆಂಟರ್ ಮಾಲ್’ಗೆ ಬಂದಿದ್ದ ಕಾರ್ಪೊರೇಟರ್ ಒಬ್ಬರ ಪತಿ ಮತ್ತು ಸಾಮಾಜಿಕ ಹೋರಾಟಗಾರ ಆಸೀಫ್ ಮತ್ತು ಅವರ ಸಂಗಡಿಗರು, ಆಕ್ಷೇಪ ವ್ಯಕ್ತಪಡಿಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಆಸೀಫ್ ಆಕ್ಷೇಪಕ್ಕೆ ಕಾರಣವೇನು?
ಪ್ರದರ್ಶನದಲ್ಲಿ ಇರುವ ಭಾವಚಿತ್ರಗಳ ಪೈಕಿ ಮುಸ್ಲಿಂ ಹೋರಾಟಗಾರರನ್ನು ಕಡೆಗಣಿಸಲಾಗಿದೆ ಎಂದು ಆಸಿಫ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ವಿ.ಡಿ.ಸಾರ್ವರ್ಕರ್ ಅವರ ಭಾವಚಿತ್ರ ಅಳವಡಿಸಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭ ಸಿಟಿ ಸೆಂಟರ್ ಮಾಲ್ ಅವರಣದಲ್ಲಿ ಕೆಲ ಕಾಲ ಗೊಂದಲ ಉಂಟಾಯಿತು.
ವಿಡಿಯೋ ವೈರಲ್ ಬೆನ್ನಿಗೆ ಆಕ್ರೋಶ
ಆಸಿಫ್ ಮತ್ತು ಅವರ ಸಂಗಡಿಗರು ಸಿಟಿ ಸೆಂಟರ್ ಮಾಲ್’ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ ವಿಡಿಯೋ ವೈರಲ್ ಆಗಿದೆ. ವಾಟ್ಸಪ್ ಮತ್ತು ಫೇಸ್’ಬುಕ್’ನಲ್ಲಿ ಹರಿದಾಡುತ್ತಿದೆ. ಅಲ್ಲದೆ ಪರ ವಿರೋಧದ ಚರ್ಚೆಗೂ ಕಾರಣವಾಯಿತು. ಇದರ ಬೆನ್ನಿಗೆ ಸಂಘ ಪರಿವಾರ ಮತ್ತು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಆಸೀಫ್ ಮತ್ತು ಆತನ ಸಂಗಡಿಗರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ನಡೆಸಿದ ಬಿಜೆಪಿ, ಸಂಘ ಪರಿವಾರ
ಇನ್ನು, ಬಿಜೆಪಿ ಮತ್ತು ಸಂಘ ಪರಿವಾರದ ಮುಖಂಡರು, ಕಾರ್ಯಕರ್ತರು ಸಿಟಿ ಸೆಂಟರ್ ಮಾಲ್ ಮುಂದೆ ಧರಣಿ ನಡೆಸಿದರು. ಆಸೀಫ್ ಮತ್ತು ಆತನ ಸಂಗಡಿಗರನ್ನು ಬಂಧಿಸಬೇಕು ಆಗ್ರಹಿಸಿದರು. ಅವರ ಬಂಧನ ಆಗುವವರೆಗೆ ತಾವು ಧರಣಿ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.
ಸಂಭ್ರಮದ ಸ್ವಾತಂತ್ರ್ಯ ಆಚರಣೆ ನಿಲ್ಲಿಸಲು ಹೊರಟಿದ್ದರು. ನಾವು ಇಲ್ಲಿ ಬಂದು ಆಚರಣೆಯನ್ನು ಮುಂದುವರೆಸಿದ್ದೇವೆ. ಪಾಲಿಕೆಯವರು ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು. ಆಸೀಫ್ ಮತ್ತು ತಂಡವನ್ನು ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ. ಜಗದೀಶ್, ಬಿಜೆಪಿ ನಗರಾಧ್ಯಕ್ಷ
ಪಾಲಿಕೆಯಿಂದ ಪೊಲೀಸ್ ದೂರು
ಭಾವಚಿತ್ರ ಪ್ರದರ್ಶನದ ವೇಳೆ ಆಕ್ಷೇಪ ವ್ಯಕ್ತಪಡಿಸಿದ ಆರೋಪ ಸಂಬಂಧ ಆಸೀಫ್ ಮತ್ತು ಆತನ ಸಹಚರರ ವಿರುದ್ಧ ಪಾಲಿಕೆ ವತಿಯಿಂದ ದೂರು ನೀಡಲಾಗಿದೆ. ‘ಐಪಿಸಿ ಸೆಕ್ಷನ್ 341, 353 ಮತ್ತು 34ರ ಅಡಿಯಲ್ಲಿ ಆಸೀಫ್ ಮತ್ತು ಆತನ ಸಂಗಡಿಗರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ಬಿಜೆಪಿ ನಗರಾಧ್ಯಕ್ಷ ಜಗದೀಶ್ ಅವರು ತಿಳಿಸಿದ್ದಾರೆ.
ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಪ್ರದರ್ಶನ ಮಾಡುವಂತೆ ಸರ್ಕಾರ ಆದೇಶಿಸಿದೆ. ಅದರಂತೆ ನಾವು ಸಿಟಿ ಸೆಂಟರ್ ಮಾಲ್’ನಲ್ಲಿ ಭಾವಚಿತ್ರ ಪ್ರದರ್ಶನ ಮಾಡಿದ್ದೇವೆ. ಅಲಂಕಾರ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಆಸೀಫ್ ಮತ್ತು ಆತನ ಸಂಗಡಿಗರು ಬಂದು ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಂದೂಗಳ ಭಾವಚಿತ್ರ ಮಾತ್ರ ಹಾಕಿದ್ದೀರ. ಮುಸ್ಲಿಂ ಹೋರಾಟಗಾರರ ಭಾವಚಿತ್ರವಿಲ್ಲ ಅಂತಾ ಗಲಾಟೆ ಮಾಡಿದ್ದಾರೆ. ಇದೆಲ್ಲ ಸಿಸಿ ಕ್ಯಾಮರಾದಲ್ಲಿಯು ರೆಕಾರ್ಡ್ ಆಗಿದೆ. ಸುನೀತಾ ಅಣ್ಣಪ್ಪ, ಮೇಯರ್
ಬ್ಯಾರಿಸ್ ಸಿಟಿ ಸೆಂಟರ್ ಮಾಲ್’ನಲ್ಲಿ ನಡೆದ ಘಟನೆಯಿಂದ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹಾಗಾಗಿ ಸಿಟಿ ಸೆಂಟರ್ ಮಾಲ್’ನಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ
HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ
✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ