ಶಿವಮೊಗ್ಗದಲ್ಲಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದ ಮಿನಿಸ್ಟರ್‌, ಇಲ್ಲಿದೆ 6 ಪ್ರಮುಖ ಪಾಯಿಂಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 AUGUST 2023

SHIMOGA : ನಗರದ ಡಿಎಆರ್‌ ಪೊಲೀಸ್‌ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ‍(Flag Hoisting) ನೆರವೇರಿಸಿದರು. ಬಳಿಕ ಸ್ವಾತಂತ್ರ್ಯೋತ್ಸವ ಸಂದೇಶ (Independence Day Speech) ನೀಡಿದರು.

ಸಂದೇಶದ ಪ್ರಮುಖ 6 ಪಾಯಿಂಟ್‌ ಇಲ್ಲಿದೆ

POINT 1 jpgಮುಂಗಾರು ಮಳೆ ವಿಳಂಬವಾಗಿದೆ. ಜಿಲ್ಲೆಯಲ್ಲಿ ಈವರೆಗು ಕಡಿಮೆ ಮಳೆಯಾಗಿದೆ. ರೈತರ ನಿರೀಕ್ಷೆಯಂತೆ ಹಿಂಗಾರು ಮಳೆ ಬರುವ ಆಶಾ ಭಾವನೆ ಇದೆ. ಮಳೆಯಿಂದಾಗಿ ಆಗಿರುವ ಜನ-ಜಾನುವಾರುಗಳ ಜೀವಹಾನಿ, ಬೆಳೆಹಾನಿಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸಂತ್ರಸ್ಥರಿಗೆ ಕೂಡಲೆ ಪರಿಹಾರ ಬಿಡುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ.

POINT 2 jpgಶಾಲೆಗಳ ಆರಂಭದ ದಿನಗಳಲ್ಲಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ, ಶೂಗಳನ್ನು ಪೂರೈಸಲಾಗಿದೆ. ಈ ಹಿಂದೆ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರಕ್ಕೆ 1 ಮೊಟ್ಟೆ ನೀಡುತ್ತಿದ್ದು, ಈಗ ವಾರಕ್ಕೆ 2 ಮೊಟ್ಟೆ ನೀಡಲಾಗುತ್ತದೆ. 10ನೇ ತರಗತಿವರೆಗೆ ಈ ಯೋಜನೆ ವಿಸ್ತರಿಸಲಾಗಿದೆ. ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ 2 ಬಾರಿ ಪೂರಕ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಇದರಿಂದ ಉನ್ನತ ಶಿಕ್ಷಣಕ್ಕೆ ಸೇರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಶಿಕ್ಷಕರ ನೇಮಕಾತಿ, ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ.

Minister-Madhu-Bangarappa-In-Shimoga-Independence-Day

POINT 3 jpgಹಲವು ದಶಕಗಳಿಂದ ಕಗ್ಗಂಟಾಗಿರುವ ಶರಾವತಿ ಮುಳುಗಡೆ ಸಂತ್ರಸ್ಥರು ಹಾಗೂ ಬಗರ್‌ಹುಕುಂ ಸಾಗುವಳಿದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುತ್ತದೆ. ಈ ವಿಚಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ವಿಶೇಷ ಆಸಕ್ತಿ ವಹಿಸಿದ್ದಾರೆ. ಶೀಘ್ರದಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ವಹಿಸಲಾಗುತ್ತದೆ. ಅರಣ್ಯ ಮತ್ತು ಕಂದಾಯ ಇಲಾಖೆಯ ನಡುವಿನ ಭೂ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಉದ್ದೇಶಿಸಲಾಗಿದೆ.

POINT 4 jpgಅಡಿಕೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ. ಎಲೆಚುಕ್ಕೆ ರೋಗ ಬೆಳೆಗಾರರಲ್ಲಿ ಆತಂಕ ತಂದೊಡ್ಡಿದೆ. ಮಾರುಕಟ್ಟೆ ಅಸ್ಥಿರತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಜಿಲ್ಲೆಯಲ್ಲಿ ಭತ್ತದ ಬೆಳೆ ಕಡಿಮೆಯಾಗುತ್ತಿದ್ದು, ಇದಕ್ಕೆ ಪ್ರೋತ್ಸಾಹ ನೀಡಲು ಚಿಂತನೆ ನಡೆಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ, ವಿವಿಧೆಡೆ ಧ್ವಜಾರೋಹಣ

POINT 5 jpgಜಿಲ್ಲೆಯಲ್ಲಿ ವೃತ್ತಿಪರ ಶಿಕ್ಷಣ ಮತ್ತು ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಜನರ ಬಹುದಿನಗಳ ಬೇಡಿಕೆಯಂತೆ ನಗರದ ಪ್ರಮುಖ ಸ್ಥಳದಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣ ಹಾಗೂ ಪ್ರಸ್ತಾಪಿಸಲಾಗಿರುವ ಆಯುಷ್ ವಿಶ್ವವಿದ್ಯಾಲಯ ಆರಂಭಿಸಲು ವಿಶೇಷ ಗಮನ ಹರಿಸಲಾಗುತ್ತದೆ.

POINT 6 jpgಗ್ರಾಮೀಣ ಭಾಗದ ಗ್ರಂಥಾಲಯಗಳನ್ನು ಮೇಲ್ದರ್ಜೆಗೇರಿಸಿ, ಅತ್ಯಾಧುನಿಕ ಹಾಗೂ ಸುಸಜ್ಜಿತ ಇ-ಲೈಬ್ರರಿಗಳನ್ನಾಗಿ ಪರಿವರ್ತಿಸುವ ಕಾರ್ಯ ಪ್ರಗತಿಯಲ್ಲಿದೆ. ಇದರಿಂದಾಗಿ ಗ್ರಾಮೀಣ ಜನರ ಬೌದ್ಧಿಕ ವಿಕಾಸಗೊಳಿಸಲು ಹಾಗೂ ಸಮಾಜದ ಮುಖ್ಯವಾಹಿನಿಗೆ ಕರೆತರಲು ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ.

PARISHRAMA neet academy

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment