ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) 2024 ರ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಈ ಬಾರಿ 1000ಕ್ಕೂ ಹೆಚ್ಚು ಅಭ್ಯರ್ಥಿಗಳು ದೇಶದ ಅತ್ಯುನ್ನತ ಸಿವಿಲ್ ಸರ್ವೀಸಸ್ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಇವರಲ್ಲಿ ಹಲವರು IAS, IPS, IFS ಸೇರಿದಂತೆ ವಿವಿಧ ಕೇಂದ್ರ ಸೇವೆಗಳ ಭಾಗವಾಗಲಿದ್ದಾರೆ.
ಈ ಸಾಧನೆಯ ಪೈಕಿ ಗಮನ ಸೆಳೆಯುತ್ತಿರುವುದು India 4 IAS ಸಂಸ್ಥೆ. ನಿವೃತ್ತ ಹಿರಿಯ ಅಧಿಕಾರಿಗಳಾದ ಡಾ. ಸಿ.ಎಸ್. ಕೆದಾರ್, ಐಎಎಸ್ ಮತ್ತು ಡಾ. ಜಿ.ಎನ್. ಶ್ರೀಕಂಠಯ್ಯ, ಐಎಫ್ಎಸ್ ಅವರ ನೇತೃತ್ವದ ಈ ಸಂಸ್ಥೆಯು 20ಕ್ಕೂ ಹೆಚ್ಚು ರ‍್ಯಾಂಕ್‌ಗಳನ್ನ ಈ ವರ್ಷ ಪಡೆದಿದೆ. ವಿಶೇಷವೆಂದರೆ, ಕರ್ನಾಟಕದಿಂದ ಆಯ್ಕೆಯಾಗಿರುವ ಅಭ್ಯರ್ಥಿಗಳಲ್ಲಿ ಶೇ.60ರಷ್ಟು ವಿದ್ಯಾರ್ಥಿಗಳು India 4 IAS ನಿಂದ ಬಂದಿದ್ದಾರೆ.
ಹಾವೇರಿ ಜಿಲ್ಲೆಯ ಡಾ. ಸಚಿನ್ ಬಿ. ಗುತ್ತೂರ್ ಅವರು ಅಖಿಲ ಭಾರತ 41ನೇ ರ‍್ಯಾಂಕ್ ಗಳಿಸಿ India 4 IAS ನ ಮೊದಲಿಗರಾಗಿದ್ದಾರೆ. ಕರ್ನಾಟಕದ ಡಾ. ರಂಗ ಮಂಜು (AIR 24) ಅವರು ಕೂಡ ಕರ್ನಾಟಕಕ್ಕೆ ಮೊದಲಿಗರಾಗಿ ಸಾಧನೆಯ ಮಾಡಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ India 4 IAS ಗಣನೀಯ ಸಾಧನೆ ಮಾಡುತ್ತಾ UPSC ಗೆ ತಯಾರಿ ಮಾಡುವ ಯುವಕರಿಗೆ ವಿಶ್ವಾಸದ ಕೇಂದ್ರವಾಗಿ ರೂಪಗೊಂಡಿದೆ. ದೆಹಲಿ, ಹೈದರಾಬಾದ್ ನಂತಹ ಶಿಕ್ಷಣ ಕೇಂದ್ರಗಳಿಂದ ಬಂದ ನಿಪುಣ ಅಧ್ಯಾಪಕರಿಂದ ಬೋಧನೆ, ಆಧುನಿಕ ಹಾಗೂ ಸೂಕ್ತವಾದ ಶೈಕ್ಷಣಿಕ ವಿಧಾನಗಳ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿರುವ ಸಂಸ್ಥೆ ಇದಾಗಿದೆ.

ಈ ಸಾಧನೆಯ ಮೂಲಕ ಕರ್ನಾಟಕವು ಕೇಂದ್ರ ನಾಗರೀಕ ಸೇವೆಗಳಿಗೆ ಹೆಚ್ಚು ಹೆಚ್ಚು ಅಧಿಕಾರಿಗಳನ್ನು ನೀಡುತ್ತಿರುವ ರಾಜ್ಯಗಳಲ್ಲಿ ಒಂದಾಗಿ ಬೆಳೆದಿದೆ. ಈ ವರ್ಷವೂ ದಿಟ್ಟತೆ, ಶಿಸ್ತು ಮತ್ತು ಸ್ಪಷ್ಟ ಗುರಿಯೊಂದಿಗೆ ಪರೀಕ್ಷೆ ಎದುರಿಸಿದ ಅಭ್ಯರ್ಥಿಗಳು ಸಾಧನೆ ಮಾಡಿದ್ದು, India 4 IAS ಮಾದರಿಯ ತರಬೇತಿ ಸಂಸ್ಥೆಗಳ ಪಾತ್ರವನ್ನು ಮತ್ತಷ್ಟು ದೃಢಪಡಿಸುತ್ತದೆ.

ಇಂಡಿಯಾ ಫಾರ್ ಐಎಎಸ್ ಸಂಸ್ಥೆಯ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ ಸೇವಾ ಪರೀಕ್ಷೆ 2024–25ರಲ್ಲಿ ಯಶಸ್ಸು ಪಡೆದ ಕರ್ನಾಟಕದ ಅಭ್ಯರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ
ಈ ಸಮಾರಂಭದಲ್ಲಿ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆಂದು ಹೆಮ್ಮೆಯಿಂದ ತಿಳಿಸುತ್ತೇವೆ. ಜೊತೆಗೆ, ಹಲವು ಹಿರಿಯ ಸೇವೆ ಸಲ್ಲಿಸುತ್ತಿರುವ ಹಾಗೂ ನಿವೃತ್ತ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಈ ಸಂದರ್ಭಕ್ಕೆ ಸಾಕ್ಷಿಯಾಗಲಿದ್ದಾರೆ.
VISIT INDIA4IAS WEBSITE : https://india4ias.com/

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















