ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022
ಶಿವಮೊಗ್ಗದ ಸೀಗೆಹಟ್ಟಿ ಈಗ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಸುದ್ದಿ ವಾಹಿನಿಗಳ ಕಾರ್ಯಕ್ಷೇತ್ರವಾಗಿ ಬದಲಾಗಿದೆ. ಹರ್ಷ ಹತ್ಯೆ ಪ್ರಕರಣ ಮತ್ತು ನಂತರ ನಡೆದ ಗಲಭೆ ಈಗ ಅಂತಾರಾಷ್ಟ್ರೀಯ ಮಾಧ್ಯಮಗಳ ಗಮನ ಸೆಳೆದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬಜರಂಗದಳ ಕಾರ್ಯಕರ್ತ ಹರ್ಷ ಅವರ ಮನೆ ಶಿವಮೊಗ್ಗದ ಸೀಗೆಹಟ್ಟಿಯಲ್ಲಿದೆ. ಬಿಜೆಪಿ, ಸಂಘ ಪರಿವಾರದ ಪ್ರಮುಖರು ಹರ್ಷ ಮನೆಗೆ ಭೇಟಿ ನೀಡುತ್ತಿದ್ದಾರೆ. ಇದನ್ನು ಸೆರೆ ಹಿಡಿಯಲು ಮತ್ತು ವರದಿ ಮಾಡಲು ರಾಜ್ಯದ ವಾಹಿನಿಗಳು ಮಾತ್ರವಲ್ಲದೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾಧ್ಯಮಗಳು ಸೀಗೆಹಟ್ಟಿಯಲ್ಲಿ ಬೀಡು ಬಿಟ್ಟಿದೆ.
ಹರ್ಷ ಅವರ ಮನೆ ಬಳಿ 50ಕ್ಕೂ ಹೆಚ್ಚು ಮಾಧ್ಯಮ ಪ್ರತಿನಿಧಿಗಳು ಜಮಾಯಿಸಿದ್ದಾರೆ. ಲೈವ್, ಚಿಟ್ ಚಾಟ್, ವಾಕ್ ಥ್ರೂ ಸೇರಿದಂತೆ ವಿವಿಧ ರೂಪದಲ್ಲಿ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ. ಮಾಧ್ಯಮದವರ ಕಾರ್ಯ ಚಟುವಟಿಕೆಯನ್ನು ಸೀಗೆಹಟ್ಟಿ ಜನ ಕುತೂಹಲದಿಂದ ಕಣ್ತುಂಬಿಕೊಳ್ಳುತ್ತಿದ್ದಾರೆ.