BREAKING NEWS – ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ

 ಶಿವಮೊಗ್ಗ  LIVE 

ಶಿವಮೊಗ್ಗ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈ‍ಶ್ವರಪ್ಪ ಅವರಿಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ (International threat call) ಬಂದಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಧಿಕಾರಿ ಅವರಿಗೆ ದೂರು ಸಲ್ಲಿಸಲು ಈಶ್ವರಪ್ಪ ನಿರ್ಧರಿಸಿದ್ದಾರೆ.

ಜವವರಿ 7ರಂದು ಈ‍ಶ್ವರಪ್ಪ ಅವರಿಗೆ ವಿದೇಶದಿಂದ ಕರೆ ಬಂದಿದೆ ಎಂದು ತಿಳಿದು ಬಂದಿದೆ. ಸದ್ಯ ಪ್ರವಾಸದಲ್ಲಿರುವ ಈ‍ಶ್ವರಪ್ಪ ಶಿವಮೊಗ್ಗಕ್ಕೆ ಹಿಂತಿರುಗಿದ ಬಳಿಕ ದೂರು ನೀಡಲು ನಿರ್ಧರಿಸಿದ್ದಾರೆ. ಜನವರಿ 9ರಂದು ಅವರು ಜಿಲ್ಲಾ ರಕ್ಷಣಾಧಿಕಾರಿ ಭೇಟಿಯಾಗಲಿದ್ದಾರೆ ಎಮದು ತಿಳಿದು ಬಂದಿದೆ.

ಬೆದರಿಕೆ ಕರೆ ಇದೇ ಮೊದಲಲ್ಲ

ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ವಿದೇಶದಿಂದ ಬೆದರಿಕೆ ಕರೆಗಳು ಬರುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ಮತ್ತು ಆರ್ಟಿಕಲ್ 370 ಕುರಿತು ಮಾತನಾಡುವುದು ನಿಲ್ಲಸಿದೆ ಇದ್ದರೆ 48 ಗಂಟೆಗಳಲ್ಲಿ ಕೊಲೆ ಮಾಡುವುದಾಗಿ ಕರೆ ಬಂದಿತ್ತು.

ಇದನ್ನೂ ಓದಿ » ಪರೀಕ್ಷೆಗು ಮೊದಲೇ ವಾಟ್ಸಪ್‌ನಲ್ಲಿ ಹರಿದಾಡಿದ ಪ್ರಶ್ನೆ ಪತ್ರಿಕೆ, ಶಿವಮೊಗ್ಗದಲ್ಲಿ ಕೇಸ್‌

2023ರಲ್ಲಿ ಬೆದರಿಕೆ ಕರೆ ಬಂದಿತ್ತು. ಅಲ್ಲದೆ ಪಿಎಫ್‌ಐ ಕಾರ್ಯಕರ್ತರು ತಮ್ಮ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದ್ದರು. 2024ರಲ್ಲಿ ತಮ್ಮ ಬೆಂಬಲಿಗರಿಗೂ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿ ಈಶ್ವರಪ್ಪ ಅವರು ಶಿವಮೊಗ್ಗ ಎಸ್‌ಪಿ ಅವರಿಗೆ ದೂರು ನೀಡಿದ್ದಾರೆ. 

KS-Eshwarappa-with-e-vishwas.

ವಿದೇಶದಿಂದ ಕೊಲೆ ಬೆದರಿಕೆ ಹಿನ್ನೆಲೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರಿಗೆ ಪೊಲೀಸ್‌ ಭದ್ರತೆ ಮತ್ತು ಎಸ್ಕಾರ್ಟ್‌ ಒದಗಿಸಲಾಗಿತ್ತು. ಇತ್ತೀಚೆಗೆ ಈ‍ಶ್ವರಪ್ಪ ಅವರಿಗೆ ಒದಗಿಸಿದ್ದ ಎಸ್ಕಾರ್ಟ್‌ ಮತ್ತು ಪೊಲೀಸ್‌ ಭದ್ರತೆಯನ್ನು ಸರ್ಕಾರ ಹಿಂಪಡೆದಿತ್ತು. ಇದರ ಬೆನ್ನಿಗೆ ಪುನಃ ಬೆದರಿಕೆ ಕರೆ ಬಂದಿದೆ ಎಂದು ಆರೋಪಿಸಲಾಗಿದೆ.

 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment