ಅಮಲಿನಲ್ಲಿ ತೂರಾಡಿ ಕಾಲೇಜು ಗೇಟ್ ಮುಂದೆಯೇ ಬಿದ್ದ ವಿದ್ಯಾರ್ಥಿಗಳು, ವಿಡಿಯೋ ವೈರಲ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಗಮನಕ್ಕೆ : ವಿದ್ಯಾರ್ಥಿಗಳ ಗೌಪ್ಯತೆ ದೃಷ್ಟಿಯಿಂದ ಅವರ ಮುಖ ತೋರಿಸಿಲ್ಲ ಮತ್ತು ಕಾಲೇಜು ಹೆಸರನ್ನು ಪ್ರಕಟಿಸಿಲ್ಲ.

SHIVAMOGGA LIVE NEWS | SHIMOGA | 25 ಜುಲೈ 2022

ಖಾಸಗಿ ಕಾಲೇಜೊಂದರ (COLLEGE) ವಿದ್ಯಾರ್ಥಿಗಳು ಅಮಲಿನಲ್ಲಿ ತೋರಾಡುತ್ತ ರಸ್ತೆ ಮೇಲೆ ಬಿದ್ದು ಹೊರಳಾಡುವ ವಿಡಿಯೋ ವೈರಲ್ ಆಗಿದೆ. ಕಾಲೇಜು ಮುಂಭಾಗವೆ ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳ ಮೊಬೈಲ್’ನಲ್ಲೇ ವಿಡಿಯೋ ರೆಕಾರ್ಡ್ ಆಗಿದೆ ಎಂದು ತಿಳಿದು ಬಂದಿದೆ.

ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅಮಲಿನಲ್ಲಿ ತೇಲಾಡುತ್ತ ಕಾಲೇಜು ಮುಂಭಾಗದ ಫುಟ್ ಪಾತ್ ಮೇಲೆ ಬಿದ್ದು ಹೊರಳಾಡಿದ್ದಾರೆ.

ವಿಡಿಯೋದಲ್ಲಿ ಏನಿದೆ?

ಅಮಲಿನಲ್ಲಿರುವ ಇಬ್ಬರು ವಿದ್ಯಾರ್ಥಿಗಳನ್ನು ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ. 57 ಸೆಕೆಂಡ್’ನ ವಿಡಿಯೋವನ್ನು ಬಸ್ ಒಂದರಲ್ಲಿ ಕುಳಿತವರು ಚಿತ್ರೀಕರಣ ಮಾಡಿದ್ದಾರೆ.

Shimoga Nanjappa Hospital

ವಿದ್ಯಾರ್ಥಿಯೊಬ್ಬ ಮುಖ ಕೆಳಗೆ ಮಾಡಿ ಫುಟ್ ಪಾತ್ ಮೇಲೆ ಬಿದ್ದಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ತಲೆ ಬಗ್ಗಿಸಿ ಕುಳಿತಿರುತ್ತಾನೆ. ಅವರ ಸ್ನೇಹಿತರು ಇಬ್ಬರನ್ನು ಸಂತೈಸುತ್ತಾರೆ. ಈ ವೇಳೆ ತಲೆ ಕೆಳಗೆ ಹಾಕಿಕೊಂಡು ಕುಳಿತಿದ್ದ ವಿದ್ಯಾರ್ಥಿ ದಿಢೀರ್ ಎದ್ದು ಮುಂದಕ್ಕೆ ನಡೆಯುತ್ತಾನೆ. ಕೆಲವು ಹೆಜ್ಜೆ ಹಾಕುವಷ್ಟರಲ್ಲಿ ತೂರಾಡಿ ಕೆಳಗೆ ಬೀಳುತ್ತಾನೆ.

ಇದೆ ವೇಳೆ ಅಲ್ಲಿಗೆ ಬಂದ ಕಾಲೇಜು (COLLEGE) ಸಿಬ್ಬಂದಿ, ವಿದ್ಯಾರ್ಥಿಗಳನ್ನು ತಡೆದು ನಿಲ್ಲಿಸಲು ಯತ್ನಿಸುತ್ತಾರೆ. ಅದರೆ ಅವರ ಮಾತು ಕೇಳದೆ ತೂರಾಡುತ್ತಲೆ ವಿದ್ಯಾರ್ಥಿ ಓಡಲು ಯತ್ನಿಸುತ್ತಾನೆ.

ವೈರಲ್ ಆಯ್ತು ವಿಡಿಯೋ

ಕಾಲೇಜು ಮುಂಭಾಗ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತಾ ಓಡಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಾಟ್ಸಪ್ ಗ್ರೂಪ್’ಗಳಲ್ಲಿಯು ವಿಡಿಯೋ ಷೇರ್ ಆಗುತ್ತಿದೆ.

ಗಾಬರಿಯಿಂದ ನೋಡುತ್ತ ನಿಂತ ಜನ

ಬ್ಯಾಗು, ಯುನಿಫಾರಂ ಧರಿಸಿಕೊಂಡು ಎಲ್ಲೆಂದರಲ್ಲಿ ಬೀಳುತ್ತಿದ್ದ ವಿದ್ಯಾರ್ಥಿಗಳನ್ನು ಜನರು ಗಾಬರಿಯಿಂದ ನೋಡುತ್ತಿದ್ದರು. ಕಾಲೇಜು ಸಮೀಪ ನಿಂತಿದ್ದ ಸಾರ್ವಜನಿಕರು ವಿದ್ಯಾರ್ಥಿಗಳು ಅಮಲಿನಲ್ಲಿ ತೇಲಾಡುತ್ತಿರುವುದನ್ನು ಗಮನಿಸಿ ಚಕಿತಗೊಂಡಿದ್ದರು.

ಮಾದಕ ವಸ್ತುನಾ? ಮದ್ಯವೋ?

ವಿಡಿಯೋ ಚಿತ್ರೀಕರಣಗೊಂಡ ದಿನ ಮತ್ತು ಸಮಯದ ಕುರಿತು ಸ್ಪಷ್ಟತೆ ಇಲ್ಲ. ಆದರೆ ವಿದ್ಯಾರ್ಥಿಗಳು ಆಗಷ್ಟೆ ಕಾಲೇಜಿನಿಂದ (COLLEGE) ಹೊರ ಬಂದಂತೆ ತೋರುತ್ತದೆ. ಈ ವಿದ್ಯಾರ್ಥಿಗಳು ಅಮಲಿಗೆ ಮದ್ಯ ಕಾರಣವೊ ಅಥವಾ ಮಾದಕ ವಸ್ತುಗಳು ಕಾರಣವೊ ಎಂಬುದು ತಿಳಿದು ಬಂದಿಲ್ಲ.

ಕಾಲೇಜು ಕ್ಯಾಂಪಸ್’ಗಳಲ್ಲಿ ಗಾಂಜಾ, ಡ್ರಗ್ಸ್ ಪೂರೈಕೆಯಾಗುತ್ತಿರುವ ಕುರಿತು ಜಿಲ್ಲೆಯಲ್ಲಿ ಆತಂಕವಿತ್ತು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಮತ್ತಷ್ಟು ಮಾದಕ ವಸ್ತುಗಳು ವಿದ್ಯಾರ್ಥಿಗಳ ಕೈ ಸೇರುತ್ತಿರುವ ಕುರಿತು ಗಂಭೀರ ಚರ್ಚೆ ಆರಂಭವಾಗಿದೆ. ಕಾಲೇಜು ಅಡಳಿತ ಮಂಡಳಿ ಮತ್ತು ಪೋಷಕರು ಜಾಗೃತಿ ಮೂಡಿಸುವತ್ತ ಹೆಜ್ಜೆ ಇರಿಸಬೇಕಿದೆ. ಪೊಲೀಸ್ ಇಲಾಖೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳುವ ಅಗತ್ಯವಿದೆ.

ಇದನ್ನೂ ಓದಿ – ಹಂದಿ ಅಣ್ಣಿ ಬರ್ಬರ ಹತ್ಯೆಗೆ ಇತ್ತು 2 ಕಾರಣ, ಏನದು? ಆರೋಪಿಗಳು ಬಾಯಿ ಬಿಟ್ಟಿದ್ದೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 25, 2022

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

Leave a Comment