ಶಿವಮೊಗ್ಗ ಲೈವ್.ಕಾಂ | ಬೆಂಗಳೂರು
ಶಿವಮೊಗ್ಗ ನಗರಕ್ಕೆ ಮಂಜೂರಾಗಿರುವ 50 ಎಲೆಕ್ಟ್ರಿಕ್ ಬಸ್‌ಗಳನ್ನು ಶೀಘ್ರವೇ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವಂತೆ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ. ಗೌಡ ಅವರು ಸಾರಿಗೆ ಸಚಿವ ಭೈರತಿ ಸುರೇಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಚೇತನ್ ಕೆ.ಗೌಡ, ನಗರದ ಸಾರಿಗೆ ವ್ಯವಸ್ಥೆಯ ಸುಧಾರಣೆ ಕು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು.

ಪ್ರಯಾಣಿಕರ ಒತ್ತಡ ನಿಭಾಯಿಸಲು ಕ್ರಮ
ಶೈಕ್ಷಣಿಕ, ವಾಣಿಜ್ಯ ಮತ್ತು ಪ್ರವಾಸೋದ್ಯಮ ಕೇಂದ್ರವಾಗಿ ಬೆಳೆಯುತ್ತಿರುವ ಶಿವಮೊಗ್ಗಕ್ಕೆ ಗ್ರಾಮೀಣ ಭಾಗದಿಂದ ನಿತ್ಯ ಸಾವಿರಾರು ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ಆಗಮಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಯಶಸ್ಸಿನ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಸದ್ಯದ ಪ್ರಯಾಣಿಕರ ದಟ್ಟಣೆ ಸಮರ್ಥವಾಗಿ ನಿಭಾಯಿಸಲು ಮತ್ತು ಜನರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಹೊಸ ಬಸ್‌ಗಳ ಕಾರ್ಯಾಚರಣೆ ಅತ್ಯಗತ್ಯ ಎಂದು ಚೇತನ್ ಗೌಡ ವಿವರಿಸಿದರು.
ಇ-ಚಾರ್ಜಿಂಗ್ ಕೇಂದ್ರ ಸ್ಥಾಪಿಸಿ
ಪರಿಸರ ಸ್ನೇಹಿ ಹಸಿರು ಸಾರಿಗೆಗೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ 50 ಇ-ಬಸ್‌ಗಳನ್ನು ರಸ್ತೆಗಿಳಿಸಬೇಕು. ಇದರ ಜೊತೆಗೆ, ಬಸ್‌ಗಳ ಯಶಸ್ವಿ ಕಾರ್ಯಾಚರಣೆಗೆ ಪೂರಕವಾಗಿ ಅತ್ಯಾಧುನಿಕ ಇ-ಚಾರ್ಜಿಂಗ್ ಕೇಂದ್ರಗಳನ್ನು ಸಹ ನಗರದಲ್ಲಿ ಸ್ಥಾಪಿಸಬೇಕು ಎಂದು ಚೇತನ್ ಕೆ.ಗೌಡ ಸಚಿವರಲ್ಲಿ ವಿನಂತಿಸಿದ್ದಾರೆ. ಮನವಿ ಸ್ವೀಕರಿಸಿದ ಸಾರಿಗೆ ಸಚಿವ ಭೈರತಿ ಸುರೇಶ್, ಶೀಘ್ರದಲ್ಲಿಯೇ ಸಕಾರಾತ್ಮಕ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಈ ಸಂದರ್ಭ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಮತ್ತು ಹೆಬ್ಬಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ವಿ. ಬಾಲಾಜಿ ಹಾಗೂ ಶ್ರೀಜಿತ್ ಉಪಸ್ಥಿತರಿದ್ದರು.