ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 OCTOBER 2023
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಸ್ಮಾರ್ಟ್ ಸಿಟಿ (smart city) ಯೋಜನೆ ಕಾಮಗಾರಿಗಳ ಗುಣಮಟ್ಟದ ಕುರಿತು ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೆ ಸಚಿವರುಗಳು ತನಿಖೆಯ ಸುಳಿವು ನೀಡಿದ್ದಾರೆ. ಈ ನಡುವೆ ಸ್ಮಾರ್ಟ್ ಸಿಟಿ ಯೋಜನೆ ವಿರುದ್ಧ 1800 ಅಕ್ಷೇಪಣೆ ಬಂದಿದೆ.
ಒಂದು ಸಾವಿರ ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳನ್ನು ನಡೆಸಲಾಗಿದೆ. 71 ಕಾಮಗಾರಿಗಳ ಪೈಕಿ ಈಗಾಗಲೆ 67 ಕಾಮಗಾರಿಗಳು ಪೂರ್ಣಗೊಂಡಿವೆ. 920 ಕೋಟಿ ರೂ. ಹಣವನ್ನು ಗುತ್ತಿಗೆದಾರರಿಗೆ ಪಾವತಿಸಲಾಗಿದೆ. ಉಳಿದ ಹಣ ಬಾಕಿ ಕಾಮಗಾರಿಗಳು ಮತ್ತು ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ನಿರ್ವಹಣೆಗೆ ಬಳಕೆಯಾಗಬೇಕಿದೆ.
ಯೋಜನೆ ವಿರುದ್ಧ ಜನರ ಆಕ್ಷೇಪ
ಸ್ಮಾರ್ಟ್ ಸಿಟಿ ಯೋಜನೆ ವಿರುದ್ಧ ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ವೇಳೆ ಸ್ಥಳೀಯರಿಗೆ ಮಾಹಿತಿ ನೀಡದೆ ಕಳಪೆ ಕಾಮಗಾರಿ ನಡೆಸಲಾಗಿದೆ ಎಂಬ ದೂರುಗಳಿದ್ದವು. ಈ ಮಧ್ಯೆ ಆಕ್ಷೇಪಣೆ ಸಲ್ಲಿಸುವಂತೆ ತಿಳಿಸಲಾಗಿತ್ತು. ‘ಈತನಕ 1800 ಆಕ್ಷೇಪಣೆಗಳು ಬಂದಿವೆ’ ಎಂದು ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಮಾಯಣ್ಣಗೌಡ ಅವರು ನಗರಾಭಿವೃದ್ಧಿ ಸಚಿವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ- ಇನ್ಮುಂದೆ ರೈಲ್ವೆ ಜನರಲ್ ಟಿಕೆಟ್‌ಗಾಗಿ ಕ್ಯೂ ನಿಲ್ಲಬೇಕಿಲ್ಲ, ಬಂದಿದೆ APP!
ಪಾಲಿಕೆಗೆ ವಹಿಸಲು ಹರಸಾಹಸ
ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಪೂರ್ಣಗೊಂಡಿದ್ದು ಅವುಗಳನ್ನು ಮಹಾನಗರ ಪಾಲಿಕೆಗೆ ಹಸ್ತಾಂತರ ಮಾಡುವ ಸಿದ್ಧತೆ ನಡೆಯುತ್ತಿದೆ. ಆದರೆ ನ್ಯೂನತೆಗಳನ್ನು ಸರಿಪಡಿಸದೆ ಪಾಲಿಕೆಗೆ ಕಾಮಗಾರಿಗಳ ಹಸ್ತಾಂತರ ಮಾಡಬಾರದು ಎಂಬ ಆಕ್ಷೇಪಣೆ ಇದೆ. ಈ ಹಿಂದೆ ಮಹಾನಗರ ಪಾಲಿಕೆ ಸಮಾನ್ಯ ಸಭೆಯಲ್ಲಿಯು ಸದಸ್ಯರು ಸಮಸ್ಯೆಗಳ ಆಗರವಾಗಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಪಾಲಿಕೆಗೆ ಹಸ್ತಾಂತರ ಮಾಡಬಾರದು ಎಂದು ವಿರೋಧ ವ್ಯಕ್ತಪಡಿಸಿದ್ದರು.
ಸ್ಮಾರ್ಟ್ ಸಿಟಿಗೆ ತನಿಖೆಯ ತೂಗುಗತ್ತಿ
ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಸ್ಮಾರ್ಟ್ ಸಿಟಿ ಕಾಮಗಾರಿಗಳ ಗುಣಮಟ್ಟದ ಕುರಿತು ಆಕ್ಷೇಪ ಇರುವ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಕುರಿತು ಆಕ್ಷೇಪಣೆಗಳಿವೆ. ಈ ಕುರಿತು ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ- ವಿವಿಧ ಜಿಲ್ಲೆಗಳಿಗೆ 34 ವಿಶೇಷ ರೈಲುಗಳು, ಹೆಚ್ಚುವರಿ ಬೋಗಿಗಳು, ಎಲ್ಲೆಲ್ಲಿಗೆ ಸ್ಪೆಷಲ್ ಟ್ರೈನ್ ಸಂಚರಿಸಲಿದೆ?
ಇನ್ನು, ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಾವಿರ ಕೋಟಿ ರೂ. ಹಣ ಸುಮ್ಮನೆ ಬರುವುದಿಲ್ಲ. ಆದ್ದರಿಂದ ಕಾಮಗಾರಿಗಳ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದೇವೆ. ತನಿಖೆಯ ಸ್ವರೂಪದ ಕುರಿತು ಮುಖ್ಯಮಂತ್ರಿ ಅವರು ನಿರ್ಧರಿಸಲಿದ್ದಾರೆ. ಯಾರೆ ತಪ್ಪು ಮಾಡಿದ್ದರು ಶಿಕ್ಷೆಯಾಗಬೇಕು ಎಂದರು.
ಜನರ ಸಲಹೆ ಪಡೆಯದೆ, ಜನಪ್ರತಿನಿಧಿಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಸ್ಮಾರ್ಟ್ ಸಿಟಿ ಯೋಜನೆ ಪೂರ್ಣಗೊಳಿಸಲಾಗಿದೆ. ಅಲ್ಲದೆ ಕಾಮಗಾರಿಯಲ್ಲಿ ಗುಣಮಟ್ಟವಿಲ್ಲದೆ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆ ಕಾಮಗಾರಿ ಕುರಿತು ತನಿಖೆ ನಡೆಸಲೇಬೇಕು ಎಂಬ ಒತ್ತಾಯವಿದೆ.