BREAKING NEWS – ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಶಿವಮೊಗ್ಗದಲ್ಲಿ ಸಾವು

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಕಾರಾಗೃಹದ ಕೈದಿಯೊಬ್ಬ (Convict) ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಮೃತರನ್ನು ಹೊಸನಗರ ತಾಲ್ಲೂಕಿನ ಗರ್ತಿಕೆರೆ, ಅಮೃತ ಗ್ರಾಮದ ಕೃಷ್ಣ (44) ಎಂದು ಗುರುತಿಸಲಾಗಿದೆ. ➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಮೃತ ಕೃಷ್ಣ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ. ಹಲವು ಬಾರಿ ಮೆಗ್ಗಾನ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆಯನ್ನು ಪಡೆದಿದ್ದ. ಪ್ರಕರಣವೊಂದರಲ್ಲಿ ಆರೋಪ ಸಾಬೀತಾದ ಹಿನ್ನಲೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು ಎಂದು ಜೈಲು ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

160125 mc gann hospital general image

ಇದನ್ನೂ ಓದಿ » ಮಂಡಗದ್ದೆ ಬಳಿ ಅರಣ್ಯ ಇಲಾಖೆ ದಿಢೀರ್‌ ಕಾರ್ಯಾಚರಣೆ, ಇಬ್ಬರು ಆರೋಪಿಗಳು ಅರೆಸ್ಟ್‌

ಡಿಸೆಂಬರ್ 5ರಂದು ಸಂಜೆ ಕೃಷ್ಣನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣ ಇಂದು ಬೆಳಗಿನ ಜಾವ 2 ಗಂಟೆಗೆ ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆಯ ವೈದ್ಯರು ದೃಢಪಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!