ಹೊಸಮನೆಯಲ್ಲಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ, ಮೂವರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | JAIL | 28 ಮೇ 2022

ಹಳೆ ದ್ವೇಷದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಮೂವರು ಆರೋಪಿಗಳಿಗೆ ಜೈಲು ಶಿಕ್ಷೆಯಾಗಿದೆ. ವಿಚಾರಣೆ ನಡೆಸಿದ ಶಿವಮೊಗ್ಗ ನ್ಯಾಯಾಲಯದ ನ್ಯಾಯಾಧೀಶರು, ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ಪ್ರಕಟಿಸಿದ್ದಾರೆ.

ಹರೀಶ್ (24) ಎಂಬಾತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಈ ಸಂಬಂಧ ಮಂಜುನಾಥ ಅಲಿಯಾಸ್ ಕಟ್ಟಿಂಗ್ ಶಾಪ್ ಮಂಜ, ಅನಿಲ, ಪ್ರಶಾಂತ್ ಅಲಿಯಾಸ್ ಕೊಡ್ಲಿ ಪ್ರಶಾಂತ್ ಎಂಬುವವರಿಗೆ ಜೈಲು ಶಿಕ್ಷೆಯಾಗಿದೆ.

ಏನಿದು ಪ್ರಕರಣ?

ಶಿವಮೊಗ್ಗದ ಹೊಸಮನೆ ಬಡಾವಣೆಯ ಚಾನಲ್ ಏರಿಯಾದಲ್ಲಿ ನಡೆದು ಹೋಗುತ್ತಿದ್ದ ಹರೀಶ್ ಮೇಲೆ ಮಚ್ಚಿನಿಂದ ದಾಳಿ ನಡೆಸಲಾಗಿತ್ತು. ಹಳೆ ದ್ವೇಷದ ಹಿನ್ನೆಲೆ ಮಾರಣಾಂತಿಕವಾಗಿ ದಾಳಿ ಮಾಡಲಾಗಿತ್ತು. 2016ರ ಜೂನ್ 17ರಂದು ಘಟನೆ ಸಂಭವಿಸಿತ್ತು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೂವರ ವಿರುದ್ಧ ಚಾರ್ಜ್ ಶೀಟ್

ಆಗ ದೊಡ್ಡಪೇಟೆ ಠಾಣೆ ಪಿಎಸ್ಐ ಆಗಿದ್ದ ಅಭಯ ಪ್ರಕಾಶ್ ಸೋಮನಾಳ್ ಅವರು ತನಿಖೆ ನಡೆಸಿದರು. 2017ರಲ್ಲಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮನು ಅವರು ವಿಚಾರಣೆ ನಡೆಸಿದರು. ಆರೋಪ ಸಾಭೀತಾದ ಹಿನ್ನೆಲೆ ಮೂವರು ಅಪರಾಧಿಗಳಿಗೆ ಶಿಕ್ಷೆ ವಿಧಿಸಿದ್ದಾರೆ.

Shimoga Nanjappa Hospital

ಕೊಲೆ ಯತ್ನ (ಐಪಿಸಿ ಸೆಕ್ಷನ್ 307) ಆರೋಪ ಸಾಬೀತಾದ ಹಿನ್ನೆಲೆ 7 ವರ್ಷ ಕಠಿಣ ಜೈಲು ಶಿಕ್ಷೆ, 40 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದರೆ 4 ತಿಂಗಳು ಹೆಚ್ಚುವರಿಯಾಗಿ ಸಾದ ಜೈಲು ಶಿಕ್ಷೆ. ಇನ್ನು, ಶಸ್ತ್ರಾಸ್ತ್ರಗಳಿಂದ ಉದ್ದೇಶಪೂರ್ವಕಾಗಿ ಹಲ್ಲೆ (ಐಪಿಸಿ ಸೆಕ್ಷನ್ 324) ಆರೋಪ ಸಾಬೀತಾದ ಹಿನ್ನೆಲೆ 2 ವರ್ಷ ಕಠಿಣ ಜೈಲು ಶಿಕ್ಷೆ, 10 ಸಾವಿರ ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದರೆ 1 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ.

ರತ್ನಮ್ಮ ಅವರು ಸರ್ಕಾರಿ ಅಭಿಯೋಜಕರಾಗಿ ವಾದ ಮಂಡಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗದ ರೈಲ್ವೆ ನಿಲ್ದಾಣ ಸಮೀಪ ಫೋನ್ ಪೇ ಮಾಡಿಸಿಕೊಂಡು ಹಣ ರಾಬರಿ..!

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 28, 2022

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

Leave a Comment