ಮಕ್ಕಳ ಅಶ್ಲೀಲ ವಿಡಿಯೋ ಅಪ್ ಲೋಡ್ ಮಾಡಿದ ದುಮ್ಮಳ್ಳಿಯ ಯುವಕನಿಗೆ ಜೈಲು, ದಂಡ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | SHIMOGA FM | 22 ಏಪ್ರಿಲ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ಘೋಷಿಸಿದೆ.

ಶಿವಮೊಗ್ಗ ತಾಲೂಕು ದಮ್ಮಳ್ಳಿಯ ರಘು (25) ಶಿಕ್ಷೆಗೆ ಒಳಗಾದವನು. ಈತ 2020ರ ಮೇ 6ರಂದು ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಅಪ್ ಲೋಡ್ ಮಾಡಿದ್ದ. ಈ ಸಂಬಂಧ ಸಿಐಡಿ ಘಟಕದ ಸೈಬರ್ ಟಿಪ್ ಲೈನ್ ಮಾಹಿತಿ ನೀಡಿತ್ತು.

ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿತ್ತು

ಸೈಬರ್ ಟಿಪ್ ಲೈನ್ ಮಾಹಿತಿ ಮೇರೆಗೆ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಿಇಎನ್ ಠಾಣೆ ಇನ್ಸ್ ಪೆಕ್ಟರ್ ಕೆ.ಟಿ.ಗುರುರಾಜ್ ಅವರು 2020ರ ಡಿಸೆಂಬರ್ 24ರಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ದಯಾನಂದ ವಿ.ಹೆಚ್ ಅವರು ವಿಚಾರಣೆ ನಡೆಸಿದರು. ರಘು ತಪ್ಪೆಸಗಿರುವುದು ಸಾಬೀತಾದ ಹಿನ್ನೆಲೆ ಎರಡು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಸಾದಾ ಶಿಕ್ಷೆ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕರಾಗಿ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

ಇದನ್ನೂ ಓದಿ | ಶಿವಮೊಗ್ಗದಲ್ಲಿ ಸಿನಿಮಾ ನೋಡಿಕೊಂಡು ಹೋಗುವಾಗ ದುರ್ಘಟನೆ, ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

Shimoga Nanjappa Hospital

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment