ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಬಸವ (78) ಎಂಬ ಕೈದಿ (jail Inmate) ಇಂದು ಬೆಳಗಿನ ಜಾವ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.
ವಯೋಸಹಜ ಕಾಯಿಲೆಗಳು ಹಾಗೂ ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದ ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಹಾಗೂ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಜನವರಿ 12ರ ರಾತ್ರಿ ಆರೋಗ್ಯ ಹದಗೆಟ್ಟಿದ್ದರಿಂದ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ 3 ಗಂಟೆ ಹೊತಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕಾರಾಗೃಹದ ಮುಖ್ಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಸವ, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುತ್ತುತುಮ್ಮೆ ಗ್ರಾಮದ ನಿವಾಸಿ. 2019ರಲ್ಲಿ ನ್ಯಾಯಾಲಯದಿಂದ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಉಡುಪಿ ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು.

ಇದನ್ನೂ ಓದಿ » ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು





