ಶಿವಮೊಗ್ಗ ಜೈಲಿನಲ್ಲಿ ಬೀಡಿ, ಸಿಗರೇಟಿಗಾಗಿ ಕೈದಿಗಳ ಪ್ರತಿಭಟನೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIMOGA, 2 SEPTEMBER 2024 : ಬೀಡಿ, ಸಿಗರೇಟ್‌ ನೀಡುವಂತೆ ಆಗ್ರಹಿಸಿ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು (Jail Inmates) ಪ್ರತಿಭಟನೆ ನಡೆಸಿದರು. ಇಂದು ಬೆಳಗ್ಗೆ ಜೈಲಿನಲ್ಲಿ ಉಪಹಾರ ಸೇವಿಸದೆ ಕೈದಿಗಳು ಪ್ರತಿಭಟಿಸಿದರು.

ಜೈಲು ಮ್ಯಾನುಯಲ್‌ನಲ್ಲಿ ನಿಷೇಧಿತ ವಸ್ತುಗಳು ಎಂಬ ಕಾರಣಕ್ಕೆ ಬೀಡಿ, ಸಿಗರೇಟ್‌ ಕೊಂಡೊಯ್ಯಲು ಕೈಗರಿಕ ಭದ್ರತಾ ಪಡೆ ಮತ್ತು ಜೈಲು ಸಿಬ್ಬಂದಿ ನಿರ್ಬಂಧ ವಿಧಿಸಿದ್ದಾರೆ. ಹಾಗಾಗಿ ಕೈದಿಗಳಿಗೆ ಬೀಡಿ, ಸಿಗರೇಟ್‌ ದೊರೆಯುತ್ತಿಲ್ಲ. ಬೀಡಿ, ಸಿಗರೇಟು ಕೊಡಬೇಕು ಎಂದು ಆಗ್ರಹಿಸಿ ಕೈದಿಗಳು ಇಂದು ಬೆಳಗ್ಗೆ ಉಪಹಾರ ತ್ಯಜಿಸಿ ಪ್ರತಿಭಟಿಸಿದರು. ಬಳಿಕ ಜೈಲು ಅಧಿಕಾರಿಗಳು ತಿಳಿ ಹೇಳಿದ್ದರಿಂದ ಕೈದಿಗಳು ಪ್ರತಿಭಟನೆ ಕೈಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.  

Shimoga-Central-Jail-Building

ಇದನ್ನೂ ಓದಿ ⇒ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ, ಮೂಲೆ ಮೂಲೆ ಶೋಧಿಸಿದ ಖಾಕಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ ಸಿಗರೇಟು ಸೇದುತ್ತಿರುವ ಫೋಟೊ ವೈರಲ್‌ ಆಗಿತ್ತು. ಇದರ ಬೆನ್ನಿಗೆ ಶಿವಮೊಗ್ಗ ಜೈಲಿನ ಮೇಲೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ ಬೀಡಿ, ಸಿಗರೇಟು, ಬೆಂಕಿ ಪೊಟ್ಟಣಗಳು ಸಿಕ್ಕಿದ್ದವು. ಸದ್ಯ ಜೈಲು ಭದ್ರತೆ ನೋಡಿಕೊಳ್ಳುತ್ತಿರುವ ಕೆಎಸ್‌ಐಎಸ್‌ಎಫ್‌ ಸಿಬ್ಬಂದಿ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ಜೈಲು ಅಧಿಕಾರಿಗಳು ನಿಷೇಧಿತ ವಸ್ತುಗಳ ಜೈಲಿನೊಳಗೆ ಕೊಂಡೊಯ್ಯದಂತೆ ನಿರ್ಬಂಧ ವಿಧಿಸಿದ್ದಾರೆ.

ಇದನ್ನೂ ಓದಿ ⇒ ವಾಟ್ಸಪ್‌ ಸ್ಟೇಟಸ್‌ ಹಾಕಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment