ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021
ನಿವೃತ್ತಿ ಬಳಿಕವು ಯೋಧರಿಗೆ ಸೇವೆಯಲ್ಲಿರುವಾಗ ಲಭಿಸುವ ಗೌರವ ದೊರೆಯಬೇಕು ಎಂದು ಶಿವಮೊಗ್ಗ ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್ ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಅಂಗವಾಗಿ ಶಿವಪ್ಪನಾಯಕ ಅರಮನೆ ಆವರಣದಲ್ಲಿ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಹುತಾತ್ಮರ ಸ್ಮರಣಾರ್ಥ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೇಣದ ಬತ್ತಿ ಹಚ್ಚಿಕೊಂಡು ಹಲವರು ಯೋಧರಿಗೆ ಗೌರವ ಸಲ್ಲಿಸುತ್ತಾರೆ. ಆದರೆ ನಿವೃತ್ತಿ ಬಳಿಕ ಸಾಮಾಜಿಕ ಬದುಕಿಗೆ ಮರಳಿದಾಗ ಯಾರೂ ನೆರವು ನೀಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇತಿಹಾಸವನ್ನು ನೋಡಿ ಕಲಿಬೇಕು. ಭವಿಷ್ಯವನ್ನು ರೂಪಿಸಿಕೊಳ್ಳಲು ಇತಿಹಾಸ ಪ್ರಮುಖವಾಗುತ್ತದೆ. ಯುವಕರಿಗೆ ಇತಿಹಾಸ ತಿಳಿಸಬೇಕಿದೆ. ಯುವ ಸಮೂಹವನ್ನು ಗಮನಿಸಿದರೆ ಭವಿಷ್ಯದ ಕುರಿತು ಆತಂಕ ಉಂಟಾಗುತ್ತದೆ. ಇಂತಹ ಕಾರ್ಯಕ್ರಮಗಳ ಮೂಲಕ ಹೆಚ್ಚು ಜನರಿಗೆ ಇತಿಹಾಸ ತಿಳಿಸಬಹುದಾಗಿದೆ ಎಂದು ಟಿ.ವಿ.ಪ್ರಕಾಶ್ ತಿಳಿಸಿದರು.
ಹತ್ಯಾಕಾಂಡದ ರೌದ್ರತೆ ಕುರಿತು ವಿಶೇಷ ಉಪನ್ಯಾಸ
ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಮತ್ತು ಹುತಾತ್ಮರ ಕುರಿತು ಡಿವಿಎಸ್ ಕಾಲೇಜು ಉಪನ್ಯಾಸಕ ಕೆ.ಜಿ.ವೆಂಕಟೇಶ್ ವಿಶೇಷ ಉಪನ್ಯಾಸ ನೀಡಿದರು. ಸ್ವಾತಂತ್ರ್ಯ ಇಲ್ಲದೆ ಇದ್ದರೆ ಮನುಷ್ಯ ಮನುಷ್ಯನಾಗಿ ಉಳಿಯುವುದಿಲ್ಲ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಇರಲಿಲ್ಲ. ಆಗ ನಮ್ಮ ಹಿರಿಯರು ತಮ್ಮ ವೈಯಕ್ತಿಕ ಸ್ವಾತಂತ್ರ್ಯವನ್ನು ಕಳೆದುಕೊಂಡು ಹೋರಾಡಿದರು. ಪಂಜಾಬಿನಲ್ಲಿ ಯುಗಾದಿ ರೀತಿಯ ಸುಗ್ಗಿ ಸಂಭ್ರಮದ ದಿನ, ಜಲಿಯನ್ ವಾಲಾ ಬಾಗ್ ಪಾರ್ಕ್‍ನಲ್ಲಿ ಪ್ರತಿಭಟನಾ ಸಭೆ ನಡೆಯುತ್ತಿದ್ದಾಗ ಬ್ರಿಟೀಷರು ದಾಳಿ ನಡೆಸಿದ್ದರು ಎಂದರು.
ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಕುರಿತು ಉಪನ್ಯಾಸಕ ಕೆ.ಜಿ.ವೆಂಕಟೇಶ್ ಮಾಹಿತಿ ನೀಡಿದರು.
ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಸಹಾಯಕ ನಿರ್ದೇಶಕ ಆರ್.ಶೇಜೇಶ್ವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com





