ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
SHIMOGA | ಶಿವಮೊಗ್ಗ ದಸರಾ ಅಂಗವಾಗಿ ಅದ್ಧೂರಿಯಾಗಿ ಜಂಬೂ ಸವಾರಿ (JAMBOO SAVARI PHOTO) ನಡೆಯಿತು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ನಂದಿ ಕೋಲಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಕ್ರೆಬೈಲಿನ ಸಾಗರ ಆನೆ ನಾಡ ದೇವಿ ಚಾಮುಂಡೇಶ್ವರಿ ಮೂರ್ತಿ ಮತ್ತು ಬೆಳ್ಳಿ ಅಂಬಾರಿಯನ್ನು ಹೊತ್ತು ಹೆಜ್ಜೆ ಹಾಕಿದ.
(JAMBOO SAVARI PHOTO) ನಂದಿ ಕೋಲಿಗೆ ಪೂಜೆ
ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಮಹಾನಗರ ಪಾಲಿಕೆಯ ಜನಪ್ರತಿನಿಧಿಗಳು, ಅಧಿಕಾರಿಗಳು ನಂದಿ ಕೋಲಿಗೆ ಪೂಜೆ ಸಲ್ಲಿಸಿದರು. ನಾಡ ದೇವಿಯನ್ನು ಹೊತ್ತ ಗಜಪಡೆಗು ಪೂಜೆ ಸಲ್ಲಿಸಲಾಯಿತು. ಆ ಬಳಿಕ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇಗುಲದ ಮುಂಭಾಗ ಅಂಬಾರಿ ಹೊತ್ತ ಗಜಪಡೆಗೆ ಪುಷ್ಪಾರ್ಚನೆ (JAMBOO SAVARI PHOTO) ನೆರವೇರಿಸಲಾಯಿತು.
(JAMBOO SAVARI PHOTO) ಗಜ ಗಾಂಭೀರ್ಯದಲ್ಲಿ ಹೆಜ್ಜೆ
ಸಕ್ರೆಬೈಲಿನ ಸಾಗರ ಆನೆ ಅಂಬಾರಿ ಹೊತ್ತು ಸಾಗಿತು. ಭಾನುಮತಿ ಮತ್ತು ನೇತ್ರಾವತಿ ಆನೆಗಳು ಸಾಗರ ಆನೆಯ ಅಕ್ಕಪಕ್ಕದಲ್ಲಿ ಹೆಜ್ಜೆ ಹಾಕಿದವು. ಈ ಮೂಲಕ ಶಿವಮೊಗ್ಗ ದಸರಾದ ಮೆರಗು ಹೆಚ್ಚಿಸಿದವು. ವಿವಿಧ ಕಲಾತಂಡಗಳು ಕೂಡ ಮೆರವಣಿಗೆಯಲ್ಲಿ ಭಾಗವಹಿಸಿದ್ದವು.
ಆನೆ ಮೇಲೆ ಅಂಬಾರಿಯನ್ನು ಕಣ್ತುಂಬಿಕೊಂಡು ಜನರು ಭಕ್ತಿ ಭಾವದಿಂದ ನಮನ ಸಲ್ಲಿಸುತ್ತಿದ್ದಾರೆ. ಮೊಬೈಲ್ ಗಳ ಮೂಲಕ ಫೋಟೊ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.
ಮೆರವಣಿಗೆ ಹಾದಿಯುದ್ದಕ್ಕು ಜನ ಸಾಗರ
ಕೋಟೆ ರಸ್ತೆಯಲ್ಲಿ ಆರಂಭವಾದ ಮೆರವಣಿಗೆ ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಪ್ಪ ನಾಯಕ ಪ್ರತಿಮೆ, ಎ.ಎ.ಸರ್ಕಲ್, ನೆಹರೂ ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ ಮಾರ್ಗವಾಗಿ ಜೈಲ್ ರಸ್ತೆ ತಲುಪಿತು. ಅಲ್ಲಿಂದ ಫ್ರೀಡಂ ಪಾರ್ಕ್ ಗೆ ಮೆರವಣಿಗೆ ಆಗಮಿಸಿತು.
ಶಕ್ತಿ ದೇವತೆಗಳ ಸಮಾಗಮ
ಇನ್ನು, ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಶಕ್ತಿ ದೇವತೆಗಳ ಸಮಾಗಮವಾಯಿತು. ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆಯ ದೇವತೆಗಳು ಈ ಭಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ನೂರಕ್ಕೂ ಹೆಚ್ಚು ದೇವಸ್ಥಾನಗಳಿಂದ ದೇವರ ಉತ್ಸವ ಮೂರ್ತಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಹಲವು ದೇವಸ್ಥಾನದ ಉತ್ಸವ ಮೂರ್ತಿಗಳನ್ನು ಒಂದೆ ಕಡೆ ಕಣ್ತುಂಬಿಕೊಂಡು ಭಕ್ತರು ಪುನೀತರಾದರು.
ಫ್ರೀಡಂ ಪಾರ್ಕ್ ನಲ್ಲಿ ಅಂಬು ಛೇದನ
ನಗರದ ಫ್ರೀಡಂ ಪಾರ್ಕ್ ನಲ್ಲಿ ಅಂಬು ಛೇದನ ಕಾರ್ಯಕ್ರಮ ನಡೆಯಿತು. ಜಂಬೂ ಸವಾರಿಯ ಆನೆಗಳು, ಉತ್ಸವ ಮೂರ್ತಿಗಳು, ಕಲಾ ತಂಡಗಳು ಫ್ರೀಡಂ ಪಾರ್ಕ್ ತಲುಪಿದ ಬಳಿ ಅಂಬು ಛೇದನ ಕಾರ್ಯಕ್ರಮ ನಡೆಯಿತು. ಶಿವಮೊಗ್ಗ ನಗರದ ವಿವಿಧೆಡೆಯಿಂದ ಸಾವಿರಾರು ಜನರು ಭಾಗವಹಿಸಿದ್ದರು. ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ಅವರು ಅಂಬು ಛೇದಿಸುವ ಮೂಲಕ ದಸರಾ ಆಚರಣೆಗೆ ತೆರೆ ಎಳೆದರು.
ಅಂಬು ಛೇದನದ ಬಳಿಕ ಒಳಿತಿಗೆ ಪ್ರಾರ್ಥಿಸಿ ಜನರು ಪರಸ್ಪರ ಬನ್ನಿ ಹಂಚಿಕೊಂಡರು. ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಪಾಲಿಕೆ ಸದಸ್ಯರು ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ದಸರಾ ಜಂಬೂ ಸವಾರಿಗೆ ವಿದ್ಯುಕ್ತ ಚಾಲನೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.