ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 JUNE 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಜಿಲ್ಲಾ ಮಟ್ಟದಲ್ಲಿಯೇ ಜನರ ಅಹವಾಲು ಆಲಿಸಿ, ಸೂಕ್ತ ಪರಿಹಾರ ಒದಗಿಸಲು ಜೂ.28ರಂದು ಕುವೆಂಪು ರಂಗಮಂದಿರದಲ್ಲಿ ಬೆಳಗ್ಗೆ 9.30ರಿಂದ ಜನ ಸ್ಪಂದನಾ (Jana Spandana) ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇರಲಿದ್ದಾರೆ. ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ತಾವೊಬ್ಬರೇ ಸಲ್ಲಿಸಬಹುದು. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಠ ಇಬ್ಬರಿಗೆ ಅವಕಾಶ ನೀಡಲಾಗುವುದು. ಅರ್ಜಿ ನೋಂದಾಯಿಸಿದ ನಂತರ ಟೋಕನ್‍ಗಳನ್ನು ಪಡೆಯಬೇಕು. ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿದವರಿಗೆ ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಇದನ್ನೂ ಓದಿ – ನಾಳೆಯಿಂದ 3 ದಿನ ಶಿವಮೊಗ್ಗ, ಸೊರಬದಲ್ಲಿ ಸಚಿವ ಮಧು ಬಂಗಾರಪ್ಪ ಪ್ರವಾಸ, ಎಲ್ಲೆಲ್ಲಿ ಭೇಟಿ ನೀಡ್ತಾರೆ?