ಮಡಬೂರು ರಾಜೇಂದ್ರ ಶಿವಮೊಗ್ಗದಲ್ಲಿ ನಿಧನ, ಮಾಜಿ ಪ್ರಧಾನಿ, ಕೇಂದ್ರ ಸಚಿವರಿಂದ ಸಂತಾಪ

ಶಿವಮೊಗ್ಗ: ಚಿಕ್ಕಮಗಳೂರು JDS ಮುಖಂಡ ಹೆಚ್‌.ಟಿ.ರಾಜೇಂದ್ರ (72) ಹೃದಯಾಘಾತದಿಂದ ಶಿವಮೊಗ್ಗದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಸ್ವಸ್ಥರಾಗಿದ್ದ ಅವರನ್ನು ಮೆಟ್ರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಾಜೇಂದ್ರ ಅವರು ಎನ್‌.ಆರ್‌.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡಬೂರು ಗ್ರಾಮದವರು. ಭಾನುವಾರ ಸಂಜೆ ಅಸ್ವಸ್ಥರಾಗಿದ್ದ ಅವರನ್ನು ಎನ್.‌ಆರ್‌.ಪುರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

HT-Rajendra-Madaburu-JDS

ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರಿಂದ ಶಿವಮೊಗ್ಗದ ಮೆಟ್ರೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೃದಯಾಘಾತದಿಂದ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ. ರಾಜೇಂದ್ರ ಅವರಿಗೆ ಪತ್ನಿ ಪಲ್ಲವಿ, ಪುತ್ರ ಅನಿರುದ್ಧ ಇದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಜೈಲಿನ ಖೈದಿಯ ಹೊಟ್ಟೆಯೊಳಗೆ ಮೊಬೈಲ್‌ ಫೋನ್‌ ಪತ್ತೆ..!

ಮಾಜಿ ಪ್ರಧಾನಿ, ಕೇಂದ್ರ ಸಚಿವರಿಂದ ಸಂತಾಪ

ಹೆಚ್‌.ಟಿ.ರಾಜೇಂದ್ರ ಜೆಡಿಎಸ್‌ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು. ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರ ಆಪ್ತ ವಲಯದಲ್ಲಿದ್ದರು. ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ರಾಜೇಂದ್ರ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : July 14, 2025 at 8:20 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜುಲೈ 14, 2025

Leave a Comment