SHIMOGA | ಡಿಸಿ ಕಚೇರಿ ಮುಂದೆ ಖಾಲಿ ಸಿಲಿಂಡರ್ ಇಟ್ಟು, ವಿಭಿನ್ನ ಪ್ರತಿಭಟನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 08 FEBRUARY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಜೆಡಿಯು ಕಾರ್ಯಕರ್ತರು ಧರಣಿ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಖಾಲಿ ಸಿಲಿಂಡರ್ ಇರಿಸಿಕೊಂಡು ಧರಣಿ ನಡೆಸಲಾಯಿತು.

ಜೆಡಿಯು ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ನೇತೃತ್ವದಲ್ಲಿ ವಿಭಿನ್ನವಾಗಿ ಧರಣಿ ನಡೆಸಲಾಯಿತು.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡಲೆ ಇಳಿಸಬೇಕು. ಜನರು ಸಂಕಷ್ಟಕ್ಕೀಡಾಗಿದ್ದು, ಬೆಲೆ ಏರಿಕೆಯಿಂದ ಜೀವನ ದುಸ್ತರವಾಗಿದೆ. ಹಾಗಾಗಿ ತೈಲೋತ್ಪನ್ನಗಳ ಬೆಲೆ ಇಳಿಸಬೇಕು ಎಂದು ಪ್ರಧಾನಿಗೆ ಮನವಿ ಮಾಡಿದರು.

ಇನ್ನು, ಪಡಿತರ ವಿತರಣಾ ಕೇಂದ್ರಗಳಲ್ಲಿ ನಾಲ್ಕು ದಿನ ಮಾತ್ರ ಪಡಿತರ ವಿತರಣೆ ಮಾಡಲಾಗುತ್ತಿದೆ. ಇದನ್ನು ವಾರ ಪೂರ್ತಿ ಮಾಡಬೇಕು ಎಂದು ಶಶಿಕುಮಾರ್ ಗೌಡ ಒತ್ತಾಯಿಸಿದರು.

ಧರಣಿ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

VIDEO REPORT

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment